ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಉಚ್ಛನ್ಯಾಯಾಲಯದಿಂದ ಅಕ್ಟೋಬರ್ 19, 2023ರ ಕಚೇರಿ ಅಧಿಸೂಚನೆಯನ್ವಯ 14 ಜಿಲ್ಲಾ ನ್ಯಾಯಾಧೀಶರುಗಳ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿತ್ತು.
ಅದರನ್ವಯ ನೇರ ನೇಮಕಾತಿ ಮೂಲಕ ಜಿಲ್ಲಾ ನ್ಯಾಯಾಧೀಶರಾಗಿ ನೇಮಕಗೊಳ್ಳಲು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿದ್ದು ಎರಡರಲ್ಲೂ ಗಳಿಸಿದ ಒಟ್ಟು ಅಂಕಗಳ ಆಧಾರದ ಮೇಲೆ ಪರಿಶಿಷ್ಟ ಜಾತಿಯ (SC/UR) ಗೀತಾ ಸಿಂಧೆ ಮತ್ತು ಪರಿಶಿಷ್ಟ ಜಾತಿಯ ವಿಶೇಷ ಚೇತನ ಮೀಸಲಾತಿಯಡಿ (SC/PwBD) ಸುರೇಂದ್ರ ಜಿ. ಅಭ್ಯರ್ಥಿಗಳನ್ನು ನೇಮಕ ಮಾಡಲಾಗಿದೆ.
ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಕರ್ನಾಟಕ ಹೈಕೋರ್ಟ್ನ ವೆಬ್ ಸೈಟ್ https://karnatakajudiciary.kar.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಉಚ್ಛ ನ್ಯಾಯಲಯದ ರಿಜಿಸ್ಟರ್ ಜನರಲ್ ಕೆ.ಎಸ್. ಭರತ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.