ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ ಪದಾಧಿಕಾರಿಗಳ ಅಯ್ಕೆ ಪ್ರಕ್ರೀಯೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಎಂ ಮಂಜುನಾಥ್ ರವರ ನೇತೃತ್ವದಲ್ಲಿ ಹಾಗೂ ರಾಜ್ಯ ಘಟಕದ ಮಹಿಳಾ ಉಪಾಧ್ಯಕ್ಷೆ ಪದ್ಮರವರ ಉಪಸ್ಥಿತಿಯಲ್ಲಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ತಿಮ್ಮೇಗೌಡ ಸಿ ಇವರ ಉಪಸ್ಥಿತಿಯಲ್ಲಿ ತಾಲ್ಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಧಿಕಾರಿಗಳ ಮತ್ತು ನೌಕರರುಗಳ ಕ್ಷೇಮಾಭಿವೃದ್ಧಿ ಸಂಘ ದೊಡ್ಡಬಳ್ಳಾಪುರ ತಾಲೂಕು ಘಟಕದ ನೂತನ ಪದಾಧಿಕಾರಿಗಳಾಗಿ ಗೌರವಾಧ್ಯಕ್ಷರಾಗಿ ಮಂಜುನಾಥ ಪಿ, ಅಧ್ಯಕ್ಷರಾಗಿ ರಾಮಾಂಜಿನಪ್ಪ ಎ ಹೆಚ್, ಉಪಾಧ್ಯಕ್ಷರಾಗಿ ಲೋಕೇಶ್ ನಾಯ್ಕ ಕೆ, ಮಹಿಳಾ ಉಪಾಧ್ಯಕ್ಷರಾಗಿ ಸಿಂಚನ ಎಂ, ಗೌರವ ಸಲಹೆಗಾರ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ಖಜಾಂಚಿ ನಾಗರಾಜು ಬಿ ಸಿ, ಕಾರ್ಯದರ್ಶಿ ಆನಂದ್, ಸಂಘಟನಾ ಕಾರ್ಯದರ್ಶಿ ರಾಮಕೃಷ್ಣ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ
ಮುನಿ ಅಂಜಿನಪ್ಪ, ಪ್ರಭಾವತಿ, ಮಹದೇವ ನಾಯ್ಕ, ಮಂಜುನಾಥ ಬಿ ಹೆಚ್, ಅನಂದ ಎಂ, ದೊಡ್ಡಬಳ್ಳಾಪುರ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಧಿಕಾರಿಗಳ ಮತ್ತು ನೌಕರರುಗಳ ಕ್ಷೇಮಾಭಿವೃದ್ಧಿ ಸಂಘಕ್ಕೆ ಆಯ್ಕೆ ಮಾಡಲಾಯಿತು.

