ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಚಿತ್ರದುರ್ಗ ತಾಲ್ಲೂಕಿನ ಭರಮಸಾಗರದ ಬಾಪೂಜಿ ಪ್ರೌಢಶಾಲೆಯಲ್ಲಿ ಈಚೆಗೆ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆ ಹಂತ-2 ಮತ್ತು 3ರ ವಿವಿಧ ಸ್ಪರ್ಧೆಗಳಲ್ಲಿ ಕೆ.ಆರ್.ಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರಾಥಮಿಕ ವಿಭಾಗದಲ್ಲಿ 6ನೇ ತರಗತಿಯ ಟಿ.ಪ್ರಿಯಾ-ದೇಶಭಕ್ತಿ ಗೀತೆ, 7ನೇ ತರಗತಿಯ ವಿ.ಸಿಂಚನಾ-ಮಿಮಿಕ್ರಿ, ವಿ.ಎಮ್.ನವ್ಯ-ಕವನವಾಚನ, ಎಂ.ದೀಕ್ಷಿತ್-ಪ್ರಬಂಧ, ಪಿ.ಕೀರ್ತನಾ-ಚಿತ್ರಕಲೆ, ಎ.ಎಸ್.ರಂಜಿತಾ-ಭಕ್ತಿಗೀತೆ, ಎಸ್.ಸೌಜನ್ಯ-ಇಂಗ್ಲಿಷ್ ಕಂಠಪಾಠದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಪ್ರೌಢಶಾಲಾ ವಿಭಾಗದಲ್ಲಿ 10ನೇ ತರಗತಿಯ ಹೆಚ್.ಚಿನ್ಮಯಿ-ಇಂಗ್ಲಿಷ್ ಭಾಷಣ, 9ನೇ ತರಗತಿಯ ಎಂ.ದೀಪಾ -ಜಾನಪದ ಗೀತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. 9ನೇ ತರಗತಿಯ ನವೀನ್ ಎಸ್-ಮಿಮಿಕ್ರಿಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ಶಾಲೆಯ 09 ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ, 03 ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಕಲೋತ್ಸವ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಶಾಲೆಯ ಪ್ರಾಂಶುಪಾಲ ಹೆಚ್.ನಾಗರಾಜ್, ಸಂಗೀತ ಶಿಕ್ಷಕ ಎ.ಎಂ.ಆರ್ ಮಲ್ಲಿಕಾರ್ಜುನಯ್ಯ, ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

