ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಸರ್ಕಾರದಲ್ಲಿ ಸ್ವಪಕ್ಷದ ಶಾಸಕರೇ ಲಂಚದ ಆರೋಪ ಮಾಡುತ್ತಿದ್ದಾರೆ. ಸರ್ಕಾರದ ಕಮಿಷನ್ ವ್ಯವಹಾರದ ವಿರುದ್ಧ ಹಿರಿಯ ಶಾಸಕರೇ ಸಿಡಿದೆದ್ದಿದ್ದಾರೆ. ಹಗರಣದ ಕುರಿತು ತನಿಖೆ ನಡೆಸಿ ಅಂತಿದ್ದಾರೆ. ಇದು ಕಾಂಗ್ರೆಸ್ ಪಕ್ಷದ 80% ಕಮಿಷನ್ ವ್ಯವಹಾರಕ್ಕೆ ಸಿಕ್ಕ ಮತ್ತೊಂದು ಸರ್ಟಿಫಿಕೇಟ್ ಎಂದು ಬಿಜೆಪಿ ಆರೋಪಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಕರ್ನಾಟಕ ಕಾಂಗ್ರೆಸ್ ಸರ್ಕಾರದ ಕರಾಳ ಮುಖವನ್ನು ಸ್ವತಃ ಆಡಳಿತ ಪಕ್ಷದ ಶಾಸಕರುಗಳೇ ದಿನಕ್ಕೊಬ್ಬರಂತೆ ಬಿಚ್ಚಿಡುತ್ತಿದ್ದಾರೆ. ನಿಮ್ಮ ಸರ್ಕಾರದ ಸಾಮಾಜಿಕ ನ್ಯಾಯ ಬಟಾ ಬಯಲಾಗುತ್ತಿದೆ ಎಂದು ಬಿಜೆಪಿ ಟೀಕಿಸಿದೆ.
ಸಚಿವ ಜಮೀರ್ ಅಹ್ಮದ್ ಅವರು ಇನ್ನು ಯಾವ ಮುಖ ಇಟ್ಟುಕೊಂಡು ಸಚಿವರಾಗಿ ಮುಂದುವರೆಯುತ್ತಿದ್ದಾರೆ? ಎಂದು ಬಿಜೆಪಿ ತೀಕ್ಷ್ಣವಾಗಿ ಪ್ರಶ್ನಿಸಿದೆ.