ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ

News Desk

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರು, ರಾಜಕೀಯ ಮುತ್ಸದ್ದಿ ಡಾ. ಶಾಮನೂರು ಶಿವಶಂಕರಪ್ಪ(94) ಅವರು ಡಿಸೆಂಬರ್ 14ರ ಭಾನುವಾರ ಸಂಜೆ 6.50ಕ್ಕೆ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ನೀಡಿದ ಚಿಕಿತ್ಸೆ ಫಲಕಾರಿಯಾಗದೇ ದಾವಣಗೆರೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ.

- Advertisement - 

ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ಡಿಸೆಂಬರ್ 15ರಂದು ವಿಧಾನಸಭೆಯಲ್ಲಿ ಸಂತಾಪ ಸೂಚನೆ ಮಂಡಿಸಲಾಗುವುದು. ಆ ದಿನ ವಿಧಾನಸಭಾ ಕಲಾಪ ನಡೆಯದು ಎಂದು ತಿಳಿದುಬಂದಿದೆ.

- Advertisement - 

Share This Article
error: Content is protected !!
";