ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯದ ಅಧಿಸೂಚನೆ ಶೀಘ್ರ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರಾಕೃತಿಕ ಅಸಮತೋಲನದ ಕಾರಣದಿಂದಾಗಿ ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕದ ಜಿಲ್ಲೆಗಳನ್ನು ರಾಜ್ಯದ ಅಭಿವೃದ್ಧಿ ವೇಗಕ್ಕೆ ಸಮನಾಗಿ ಮುನ್ನಡೆಸಿಕೊಂಡು ಹೋಗುವ ಬದ್ಧತೆಯೊಂದಿಗೆ ಕಲ್ಯಾಣ ಕರ್ನಾಟಕ ಉತ್ಸವದ ಈ ದಿನದಂದು ಮಹತ್ವದ ಘೋಷಣೆಯೊಂದನ್ನು ಹೊರಡಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಭಾಗದ ಆಡಳಿತಾತ್ಮಕ ಕಾರ್ಯಗಳು ಹಾಗೂ ಪ್ರಗತಿಯ ವೇಗವನ್ನು ಹೆಚ್ಚಿಸಲು ಅತೀ ಶೀಘ್ರದಲ್ಲೇ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಘೋಷಣೆ ಮಾಡಿದ್ದು, ಸದ್ಯದಲ್ಲೇ ಅಧಿಸೂಚನೆಯನ್ನು ಕೂಡ ಹೊರಡಿಸಲಾಗುವುದು.

- Advertisement - 

ಪ್ರಸಕ್ತ ಸಾಲಿನಲ್ಲಿ ಕೆಕೆಆರ್‌ಡಿಬಿಗೆ 5,000 ಕೋಟಿ ಅನುದಾನ ನೀಡಲಾಗಿದ್ದು, ಈ ಭಾಗದ ಪ್ರಗತಿಗೆ ವಿಶೇಷ ಕಾಳಜಿ ವಹಿಸುವ ಮೂಲಕ 371ಜೆ ವಿಶೇಷ ಪ್ರಾತಿನಿಧ್ಯವನ್ನು ಅರ್ಥಪೂರ್ಣವಾಗಿಸಿದ್ದೇವೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

 

- Advertisement - 

Share This Article
error: Content is protected !!
";