ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯ ಪ್ರಗತಿ ಪರ ರೇಷ್ಮೆ ಬೆಳೆಗಾರರಿಗೆ 2023-24 ಮತ್ತು 2024-25 ನೇ ಸಾಲಿನ ರಾಜ್ಯ ಮತ್ತು ಜಿಲ್ಲಾ ಮಟ್ಟದ ರೇಷ್ಮೆ ಕೃಷಿ ಪ್ರಶಸ್ತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಫೆ.7 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಜಿಲ್ಲೆಯ ರೈತರು ಕನಿಷ್ಠ 1 ಎಕರೆ ಹಿಪ್ಪುನೇರಳೆ ತೋಟ ಹಾಗೂ ಪ್ರತ್ಯೇಕ ಹುಳು ಸಾಕಾಣಿಕಾ ಮನೆ ಹೊಂದಿರಬೇಕು. 100 ಮೊಟ್ಟೆಗೆ ಸರಾಸರಿ ರೇಷ್ಮೆ ಗೂಡಿನ ಇಳುವರಿ 65 ಕೆ.ಜಿ. ಹಾಗೂ ಒಂದು ಎಕರೆಗೆ ರೇಷ್ಮ ಗೂಡಿನ ಉತ್ಪಾದನೆ 500 ಕೆ.ಜಿ.ಗಿಂತ ಕಡಿಮೆ ಇರಬಾರದು. ರೇಷ್ಮೆ ಬೆಳೆಗಾರರು ರೇಷ್ಮೆ ಪಾಸ್ ಬುಕ್, ರೇಷ್ಮೆ ಮೊಟ್ಟೆ ಹಾಗೂ ಚಾಕಿ ಖರೀದಸಿರುವ ಕುರಿತು ರೇಷ್ಮೆ ಗೂಡು ಮಾಡಿರುವ ಬಗ್ಗೆ ದಾಖಲಾತಿಗಳನ್ನು ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಸ್ಥಳಿಯ ರೇಷ್ಮೆ ವಿಸ್ತರಣಾಧಿಕಾರಿಗಳು, ರೇಷ್ಮೆ ಸಹಾಯಕ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಿ ಅರ್ಜಿ ಪಡೆದು ಅಗತ್ಯ ಮಾಹಿತಿ ಹಾಗೂ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಕಛೇರಿಗೆ ಸಲ್ಲಿಸುವಂತೆ ಜಿಲ್ಲಾ ಪಂಚಾಯಿತಿ ರೇಷ್ಮೆ ಉಪನಿರ್ದೇಶಕ ಬೋಜಣ್ಣ ಎಸ್. ತಿಳಿಸಿದರು.

