ರಾಷ್ಟ್ರೀಯ ಸೇವಾ ಯೋಜನೆಯಿಂದ ಸೇವಾ ಮನೋಭಾವ ಜಾಗೃತ-ಉದಯ್ ಆರಾಧ್ಯ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ತೂಬಗೆರೆ ಯಲ್ಲಿ ಶಿಕ್ಷಣದೊಂದಿಗೆ ಸೇವೆ ಮತ್ತು ಶಿಕ್ಷಣದೊಂದಿಗೆ ವ್ಯಕ್ತಿತ್ವ ವಿಕಸನ ಎಂಬ ಎರಡು ಧ್ಯೇಯಗಳೊಂದಿಗೆ ಗಾಂಧೀಜಿಯವರ ಜನ್ಮ ಶತಮಾನೋತ್ಸವ ಸಂದರ್ಭದಲ್ಲಿ ಆರಂಭವಾದ ರಾಷ್ಟ್ರೀಯ ಸೇವಾ ಯೋಜನೆಯಿಂದ ಸಮಾಜದಲ್ಲಿ ಸೇವಾ ಮನೋಭಾವನೆ ಜಾಗೃತವಾಗುತ್ತಿದೆ ಎಂದು ತೂಬಗೆರೆ ಹೋಬಳಿ ಕಸಾಪ ಗೌರವ ಕಾರ್ಯದರ್ಶಿ ಉದಯ ಆರಾಧ್ಯ ಅಭಿಪ್ರಾಯ ಪಟ್ಟರು.

ಬೆಂಗಳೂರಿನ ಉತ್ತರ ವಿಶ್ವವಿದ್ಯಾನಿಲಯ ಪ್ರಥಮ ದರ್ಜೆ ಕಾಲೇಜು ದೊಡ್ಡಬಳ್ಳಾಪುರದ , ರಾಷ್ಟ್ರೀಯ ಸೇವಾ ಯೋಜನಾ ಘಟಕ (NSS) ವತಿಯಿಂದ ತೂಬಗೆರೆ ಗ್ರಾಮದಲ್ಲಿ ಆಯೋಜಿಸಿದ್ದ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಶಿಬಿರಾರ್ಥಿಗಳು ಇಲ್ಲಿ ಕಲಿತ ತತ್ವಗಳನ್ನು ಜೀವನದುದ್ದಕ್ಕೂ ಅಳವಡಿಸಿಕೊಳ್ಳುಬೇಕು.ಈ ಶಿಬಿರದ ಅವಧಿಯಲ್ಲಿ ಗ್ರಾಮಾಂತರ ಪ್ರದೇಶದ ಜನಜೀವನ ಒಡನಾಟ ಹೇಗಿದೆ ಅವರ ಕಷ್ಟ ಸುಖಗಳೇನು ಎಂಬುದು ನಿಮಗೆ ಅರಿವಾಗಿದೆ ಮುನ್ನೊಂದು ದಿನ ನೀವು ಒಳ್ಳೆಯ ಸ್ಥಾನ ದೊರೆತ ಸಂದರ್ಭದಲ್ಲಿ ಈ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಶ್ರಮಿಸಿ ಎಂದು ಕರೆ ನೀಡಿದರು.

ಹಿರಿಯ ಕನ್ನಡಪರ ಹೋರಾಟಗಾರ ತೂಬಗೆರೆ ಷರೀಫ್ ಮಾತಾನಾಡಿ ಯುವಜನತೆಯಲ್ಲಿ ಸೇವಾ ಮನೋಭಾವ ರೂಪಿಸುವುದು ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಅಭಿಪ್ರಾಯ ಪಟ್ಟರು. 

ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ‌ ಸದಾಶಿವ ರಾಮಚಂದ್ರ ಮಾತಾನಾಡಿದ,ಶಿಬಿರದ ಯಶಸ್ವಿ ನಿರ್ವಹಣೆಗೆ ಕಾರಣರಾದ ಯೋಜನಾಧಿಕಾರಿಗಳು ಮತ್ತು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಶಿಬಿರಾರ್ಥಿಗಳು ಏಳು ದಿನಗಳವರೆಗೆ ಗ್ರಾಮದ ಶಾಲೆ, ಆಸ್ಪತ್ರೆ, ಬಸ್ ನಿಲ್ದಾಣದಲ್ಲಿ  ಶ್ರಮದಾನ ಹಾಗೂ ಸುತ್ತ್ತಲಿನ ಪ್ರದೇಶದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡರು.

- Advertisement - 
Share This Article
error: Content is protected !!
";