ಯುವಕ/ಯುವತಿಯರಿಗೆ ಹೊಲಿಗೆ ಹಾಗೂ ವಿಡಿಯೋಗ್ರಫಿ ತರಬೇತಿ ಶಿಬಿರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಯುವಕ/ ಯುವತಿಯರಿಗೆ ಸ್ವಯಂ ಉದ್ಯೋಗ ಒದಗಿಸಿಕೊಡುವ ನಿಟ್ಟಿನಲ್ಲಿ ಹೊಲಿಗೆ ಹಾಗೂ ವಿಡಿಯೋಗ್ರಫಿ ತರಬೇತಿ ಶಿಬಿರವನ್ನು ಬೆಂಗಳೂರಿನ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಹೊಲಿಗೆ ತರಬೇತಿ ಶಿಬಿರ 20 ದಿನಗಳಾಗಿದ್ದು, ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಫೇಲ್ ಅಥವಾ ಪಾಸ್ ಆಗಿರಬೇಕು. ನವೆಂಬರ್ 7 ರಿಂದ 26 ರವರೆಗೆ ತರಬೇತಿ ನೀಡಲಾಗುವುದು. ವಿಡಿಯೋಗ್ರಫಿ ತರಬೇತಿ ಶಿಬಿರ 12 ದಿನಗಳಾಗಿದ್ದು, ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಫೇಲ್ ಅಥವಾ ಪಾಸ್ ಆಗಿರಬೇಕು.

ತರಬೇತಿಯು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ನಡೆಯುತ್ತದೆ. ತರಬೇತಿ ಶಿಬಿರದಲ್ಲಿ ಭಾಗವಹಿಸುವ ಯುವಕ/ಯುವತಿಯರಿಗೆ ಲಘು ಉಪಹಾರ ಒದಗಿಸಲಾಗುವುದು. ಶಿಬಿರಾರ್ಥಿಗಳಿಗೆ ಪ್ರಯಾಣ ಭತ್ಯೆ ನೀಡಲಾಗುವುದು. ಅಭ್ಯರ್ಥಿಗಳ ವಯೋಮಾನ 18 ರಿಂದ 40 ವರ್ಷದೊಳಗಿನ ಯುವಕ/ಯುವತಿಯರು ಮಾತ್ರ ಭಾಗವಹಿಸಲು ಅರ್ಹರು. ಹೊರ ಜಿಲ್ಲೆಗಳಿಂದ ಆಗಮಿಸುವ ಶಿಬಿರಾರ್ಥಿಗಳಿಗೆ ಸಾಮಾನ್ಯ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು.

ಆಸಕ್ತ ಯುವಕ/ ಯುವತಿಯರು ತಮ್ಮ ಜನ್ಮ ದಿನಾಂಕದ ದಾಖಲೆಯೊಂದಿಗೆ (ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಪ್ರತಿ) ಕಚೇರಿಯ ವಿಳಾಸದಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ವಿವರಗಳಿಗಾಗಿ ಸಹಾಯವಾಣಿ ಸಂಖ್ಯೆ : 155265 ಹಾಗೂ ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಯುವ ಕೇಂದ್ರ, ನೃಪತುಂಗ ರಸ್ತೆ, ಬೆಂಗಳೂರು01, ಮೊಬೈಲ್ ಸಂಖ್ಯೆ: 9731251411 ಕಚೇರಿ ವೇಳೆಯಲ್ಲಿ ಸಂಪರ್ಕಿಸುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement -  - Advertisement -  - Advertisement - 
Share This Article
error: Content is protected !!
";