ಮೆಡಿಕಲ್ ಕಾಲೇಜ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

News Desk

ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಶಿವಮೊಗ್ಗ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದ ಸಹ ಪ್ರಾಧ್ಯಾಪಕ ಅಶ್ವಿನ್ ಹೆಬ್ಬಾರ್‌ ವಿರುದ್ಧ ಮತ್ತೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ.

ಲೈಂಗಿಕ ಕಿರುಕುಳ ಆರೋಪದ ಮೇಲೆ ಡಾ ಅಶ್ವಿನ್ ಹೆಬ್ಬಾರ್ ಈ ಹಿಂದೆ ಮೂರು ತಿಂಗಳು ಸಸ್ಪೆಂಡ್ ಆಗಿದ್ದರು. ಇದೀಗ ಮತ್ತೋರ್ವ ಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ಡಾ.ಅಶ್ವಿನ್ ಹೆಬ್ಬಾರ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. 

- Advertisement - 

ಈ ಸಂಬಂಧ ಸಂತ್ರಸ್ತ ವಿದ್ಯಾರ್ಥಿನಿ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿರುವ ವಿಷಯ ತಿಳಿಯುತ್ತಿದ್ದಂತೆ ಸಹ ಪ್ರಾಧ್ಯಾಪಕ ಡಾ.ಅಶ್ವಿನ್ ಹೆಬ್ಬಾರ್‌ ಕರ್ತವ್ಯಕ್ಕೆ ಗೈರಾಗಿದ್ದಾರೆ.

 ಹೀಗಾಗಿ ಅಶ್ವಿನ್ ಹೆಬ್ಬಾರ್‌ ಮೇಲೆ ಮತ್ತಷ್ಟು ಅನುಮಾನ ಹುಟ್ಟಿಕೊಂಡಿದೆ. ಈ ಪ್ರಕರಣ ಸಂಬಂಧ ಸಿಮ್ಸ್ ನ ಮುಖ್ಯ ಆಡಳಿತಾಧಿಕಾರಿ ಉಮಾ ಡಿ ಸದಾಶಿವ ಪ್ರತಿಕ್ರಿಯಿಸಿದ್ದು, ಕಾಲೇಜಿನ ಆಂತರಿಕ ತನಿಖಾ ವರದಿ ಮತ್ತು ಪೊಲೀಸ್ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುತ್ತೇವೆ. ಎರಡು ತನಿಖಾ ವರದಿಗಳನ್ನು ಆಧರಿಸಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.

- Advertisement - 

 

Share This Article
error: Content is protected !!
";