ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪ್ರಧಾನ ಅಂಚೆ ಕಚೇರಿ ಪಕ್ಕದ ಪಶುಆಸ್ಪತ್ರೆ ಆವರಣದಲ್ಲಿರುವ ಪಶುಪಾಲನ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಇದೇ ಮೇ 12 ರಿಂದ 13 ರವರೆಗೆ “ಕುರಿ ಮತ್ತು ಮೇಕೆ ಸಾಕಾಣಿಕೆ ವೈಜ್ಞಾನಿಕ ತರಬೇತಿ” ಹಮ್ಮಿಕೊಳ್ಳಲಾಗಿದೆ.
ಈ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ನೀಡಲಾಗುವುದಿಲ್ಲ. ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 3 ಪಾಸ್ಪೋರ್ಟ್ ಸೈಜ್ ಪೋಟೋ, ಬ್ಯಾಂಕ್ ಪಾಸ್ ಬುಕ್ ಪ್ರತಿ ತರಬೇಕು. ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ತರಬೇಕು. ತರಬೇತಿ ನೀಡಲು 25 ಜನರ ಗುರಿ ನಿಗಧಿಪಡಿಸಲಾಗಿದೆ.
ಹೆಚ್ಚಿನ ವಿವರಕ್ಕಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಚಿತ್ರದುರ್ಗ ಅವರ ದೂರವಾಣಿ ಸಂಖ್ಯೆ 9482943111, 9886002248, 9886803637 ಗೆ ಸಂಪರ್ಕಿಸಲು ಕೋರಿದೆ. ತರಬೇತಿಯಲ್ಲಿ ಭಾಗವಹಿಸಲು ಇಚ್ಚಿಸುವ ರೈತರು ಮುಂಚಿತವಾಗಿ ವಾಟ್ಸಪ್ ಮೂಲಕ ತಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ನೊಂದಾವಣೆ ಮಾಡಿಕೊಳ್ಳಬೇಕು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.