ಕುರಿ, ಕೋಳಿ ಮತ್ತು ಹಸು ಸಾಕಾಣಿಕೆ: ತರಬೇತಿಗೆ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ರುಡ್‍ಸೆಟ್ ಸಂಸ್ಥೆಯಲ್ಲಿ ನಿರುದ್ಯೋಗಿ ಗ್ರಾಮೀಣ ಭಾಗದ ಯುವಕಯುವತಿಯರಿಗಾಗಿ ಸ್ವ ಉದ್ಯೋಗ ಮಾಡಲು ಕುರಿ, ಕೋಳಿ ಮತ್ತು ಹಸು ಸಾಕಾಣಿಕೆ ತರಬೇತಿಯನ್ನು ಇದೇ ಜೂನ್ 20 ರಿಂದ ಪ್ರಾರಂಭಿಸಲಾಗುವುದು. ಆಸಕ್ತರು ನೇರವಾಗಿ ತರಬೇತಿಗೆ ಹಾಜರಾಗಲು ತಿಳಿಸಲಾಗಿದೆ.

- Advertisement - 

ಕುರಿ, ಕೋಳಿ ಮತ್ತು ಹಸು ಸಾಕಾಣಿಕೆ ಕುರಿತು ಇದೇ ಜೂನ್ 20 ರಿಂದ ತರಬೇತಿ ಪ್ರಾರಂಭವಾಗಲಿದ್ದು, 13 ದಿನಗಳ ಕಾಲ ತರಬೇತಿ ನೀಡಲಾಗುವುದು. ಅಭ್ಯರ್ಥಿಗಳು 19 ರಿಂದ 45 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು. ಕನ್ನಡ ಓದಲು ಬರೆಯಲು ಬಲ್ಲವರಾಗಿರಬೇಕು.

- Advertisement - 

ತರಬೇತಿಗೆ ಸಂಬಂಧಿಸಿದಂತೆ ಪ್ರಾಥಮಿಕ ಜ್ಞಾನ ಹೊಂದಿರಬೇಕು. ಉದ್ಯೋಗವನ್ನು ಮಾಡಬೇಕು ಎಂಬ ಆಸಕ್ತಿ ಹೊಂದಿರಬೇಕು. ಈ ತರಬೇತಿಗೆ ಸಂಬಂಧಪಟ್ಟ ಕೌಶಲ್ಯ ತರಬೇತಿ ಪ್ರಾಥಮಿಕ ಜ್ಞಾನ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಊಟ ಮತ್ತು ವಸತಿ ಸಹಿತವಾಗಿ ಸಂಪೂರ್ಣ ಉಚಿತವಾಗಿರುತ್ತದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಮೊಬೈಲ್ ನಂಬರ್‍ವುಳ್ಳ ಸ್ವವಿಳಾಸದ ಅರ್ಜಿಯೊಂದಿಗೆ 4 ಪಾಸ್‍ಪೋರ್ಟ್ ಸೈಜ್‍ಫೋಟೋಗಳು, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್ ಎರಡು ಪ್ರತಿಗಳೊಂದಿಗೆ ರುಡ್‍ಸೆಟ್ ಸಂಸ್ಥೆಗೆ ನೇರವಾಗಿ ಬಂದು ತರಬೇತಿಗೆ ಹಾಜರಾಗಲು ತಿಳಿಸಲಾಗಿದೆ.

- Advertisement - 

ಹೆಚ್ಚಿನ ಮಾಹಿತಿಗಾಗಿ 8618282445, 9481778047, 9019299901, 8660627785 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ರುಡ್‍ಸೆಟ್ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

Share This Article
error: Content is protected !!
";