ಉಗ್ರರ ದಾಳಿಗೆ ಶಿವಮೊಗ್ಗದ ಮಂಜುನಾಥ್ ಬಲಿ, ಧರ್ಮ ಪರಿಶೀಲಿಸಿ ಗುಂಡಿನ ದಾಳಿ ಮಾಡಿದ ಉಗ್ರ

News Desk

ಚಂದ್ರವಳ್ಳಿ ನ್ಯೂಸ್, ಪಹಲ್ಗಾಮ್(ಜಮ್ಮು ಮತ್ತು ಕಾಶ್ಮೀರ):
ಪಾಕ್ ಮೂಲದ ಭಯೋತ್ಪಾದಕ ಉಗ್ರರು ಜಮ್ಮು ಮತ್ತು ಕಾಶ್ಮೀರದಲ್ಲಿ ದುಷ್ಕೃತ್ಯ ಎಸಗಿದ್ದಾರೆ. ಹಿಂದೂ ಪ್ರವಾಸಿಗರನ್ನು ಗುರಿಯಾಗಿಸಿರುವ ಉಗ್ರರು ಯಾವ ಧರ್ಮ ಅಂತ ಕೇಳಿ ಹಿಂದೂ ಪ್ರವಾಸಿಗರ ಮೇಲೆ ಗುಂಡಿನ ದಾಳಿ ಮಾಡಿ ದೃಶ್ಕೃತ್ಯ ಎಸಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಮಿನಿ ಸ್ವಿಟ್ಜರ್ಲ್ಯಾಂಡ್ ಎಂದೇ ಹೆಸರಾಗಿರುವ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಟ್ರಕಿಂಗ್ ಗೆ ಹೋಗಿದ್ದ ಪ್ರವಾಸಿಗರ ಮೇಲೆ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿ ಕೆಲವರನ್ನ ಹತ್ಯೆ ಮಾಡಿದ್ದಾರೆ.

ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಅವರು ಉಗ್ರರು ನಡೆಸಿದ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಆದರೆ ಇದೇ ದಾಳಿಯಲ್ಲಿ ಮಂಜುನಾಥ್ ಅವರ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ. ಇವರೊಟ್ಟಿಗಿದ್ದ ಏಳು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳಾಂತರಿಸಲು ಆ್ಯಂಬುಲೆನ್ಸ್ ಗಳನ್ನು ರವಾನಿಸಲಾಗಿದೆ. ಉಗ್ರರಿಂದ ದಾಳಿಯಾಗುತ್ತಿದ್ದಂತೆ ಭಾರತೀಯ ಸೇನೆ ಪ್ರದೇಶವನ್ನು ಸುತ್ತುವರೆದಿದ್ದು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಯಾವ ಧರ್ಮ- ಶಿವಮೊಗ್ಗದ ಮಂಜುನಾಥ್ ಉಗ್ರನ ದಾಳಿಗೆ ಸಾವನ್ನಪ್ಪಿದ್ದಾರೆ. ಮಂಜುನಾಥ್ ಅವರ ಮೇಲೆ ಗುಂಡಿನ ದಾಳಿ ನಡೆಸುವುದಕ್ಕೂ ಮುನ್ನ ಉಗ್ರ ಯಾವ ಧರ್ಮ ಎಂದು ಪ್ರಶ್ನಿಸಿದ್ದು, ಬಳಿಕ ಪಕ್ಕದಲ್ಲೇ ನಿಂತು ತಲೆಗೆ ಗುಂಡು ಹಾರಿಸಿ ಕೊಂದಿದ್ದಾನೆ.

ಮೃತ ಮಂಜುನಾಥ್ ಪತ್ನಿ ಪಲ್ಲವಿ ಅವರು ಉಗ್ರನ ಕೃತ್ಯದ ಭೀಕರತೆಯನ್ನು ಮಾಧ್ಯಮಗಳೊಂದಿಗೆ ಹೇಳಿಕೊಂಡಿದ್ದು ನನ್ನ ಪತಿಯ ಕೊಂದ ಉಗ್ರನ ಬಳಿ ನನ್ನ ಪತಿಯನ್ನಷ್ಟೇ ಏಕೆ ಕೊಂದೆ? ನನ್ನನ್ನೂ ನನ್ನ ಮಗನನ್ನೂ ಕೊಂದುಬಿಡು ಎಂದು ಛಿ ಮಾರಿ ಹಾಕಿದ್ದಾರೆ. ಇದಕ್ಕೆ ತಣ್ಣಗೆ ಉತ್ತರಿಸಿರುವ ಉಗ್ರ ಹೋಗಿ ಇದನ್ನು ಮೋದಿಗೆ ಹೇಳು, ನಿಮ್ಮಿಬ್ಬರನ್ನೂ ಜೀವ ಸಹಿತ ಬಿಡುತ್ತಿದ್ದೇನೆ ಎಂದು ಹೇಳಿ ಪರಾರಿಯಾಗಿದ್ದಾನೆ ಎಂದು ಹೇಳಿದ್ದಾರೆ.
ವ್ಯಾಪಕ ಖಂಡನೆ-

ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರ ದಾಳಿಯನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ರಾಜಕಾರಣಿಗಳು ಖಂಡಿಸಿದ್ದಾರೆ. ಘಟನೆಯ ಬಗ್ಗೆ ವಿವರ ಕೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪರಿಸ್ಥಿತಿ ಅವಲೋಕಿಸಲು ಸ್ವತಃ ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಮಧ್ಯೆ ಕರ್ನಾಟಕದ ಪ್ರವಾಸಿ ಮಂಜುನಾಥ್ ಅವರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ವಾಪಸ್ ಕರೆತರಲು ಹಾಗೂ ಉಳಿದ ಕನ್ನಡಿಗರನ್ನು ಸುರಕ್ಷಿತವಾಗಿ ವಾಪಸ್ ಕರೆತರುವುದಕ್ಕಾಗಿ ರಾಜ್ಯದಿಂದ ತಂಡವೊಂದು ಕಾಶ್ಮೀರಕ್ಕೆ ತೆರಳಲಿದೆ.

Share This Article
error: Content is protected !!
";