ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನವೆಂಬರ್-21ಕ್ಕೆ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರಂತೆ ನಿಜವೇ ಎನ್ನುವ ಪತ್ರಕರ್ತರ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆದ ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ಅಲೆಮಾರಿ ಸಮುದಾಯಗಳಿಗೆ ಒಳಮೀಸಲಾತಿ ಕುರಿತ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುವಾಗ ಸಿದ್ದರಾಮಯ್ಯ ಅವರಿಗೆ ಡಿಕೆ ಶಿವಕುಮಾರ್ ಅವರ ಪದಗ್ರಹಣ ಬಗ್ಗೆ ಪತ್ರಕರ್ತರೊಬ್ಬರು ಪ್ರಶ್ನಿಸಿದರು.
ಇದರಿಂದ ಸಿದ್ದರಾಮಯ್ಯ ತೀವ್ರ ಗರಂ ಆಗಿ, ಯಾರ್ ಹೇಳಿದ್ದು? ನಿಂಗೆ, ಯಾರ್ ಹೇಳಿದ್ರು? ನಿಂಗೆ ಹೆಂಗೆ ಗೊತ್ತಾಯ್ತು? ಯಾವ ಪತ್ರಿಕೆ? ಯಾವ ಪತ್ರಿಕೆ ನೋಡಿದೆ ನೀನು? ನಾನು ಎಲ್ಲಾ ಪತ್ರಿಕೆ ಓದುತ್ತೇನೆ. ಯಾವುದರಲ್ಲೂ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತನೇ ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನು ಹಾಕಿ ತಬ್ಬಿಬ್ಬು ಮಾಡಿದರು.
ಪತ್ರಕರ್ತರು ಬಳಿಕ ಪತ್ರಿಕೆಯ ಹೆಸರು ಹೇಳುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದ ಘಟನೆ ಕೂಡ ನಡೆಯಿತು.

