ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಮುಖ್ಯಮಂತ್ರಿ ಪಟ್ಟ ಉಳಿಸಿಕೊಳ್ಳುವ ಭರದಲ್ಲಿ ಸಿದ್ದರಾಮಯ್ಯ, ಅದೇ ಕುರ್ಚಿ ಕಬಳಿಸುವಲ್ಲಿ ಡಿ.ಕೆ.ಶಿವಕುಮಾರ್ ಅವರು ಕಾಲ ಕಳೆಯುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ.
ಪ್ರತಿಪಕ್ಷದವರು ಏನೇ ಪ್ರಶ್ನೆ ಮಾಡಿದರೂ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುತ್ತಾರೆ. ಎಲ್ಲವನ್ನೂ ಕೇಂದ್ರವೇ ಮಾಡುವುದಾದರೆ ರಾಜ್ಯಕ್ಕೆ ಮುಖ್ಯಮಂತ್ರಿ ಏಕೆ ಬೇಕು ಎಂದು ವಿಜಯೇಂದ್ರ ಖಾರವಾಗಿ ಪ್ರಶ್ನಿಸಿದ್ದಾರೆ.
ಸಿಎಂ ಮತ್ತು ಡಿಸಿಎಂ ಇಬ್ಬರೂ ತಮ್ಮ ತಮ್ಮ ವಾದಗಳಲ್ಲಿನಿಸ್ಸೀಮರಾಗಿದ್ದಾರೆ. ರಾಜ್ಯದ ಜನರ ರೈತರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಸದನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು ಎಂದು ಪಟ್ಟು ಹಿಡಿಯುತ್ತೇವೆ ಎಂದು ತಿಳಿಸಿದರು.

