ಶಿವಲಿಂಗೇಗೌಡ, ಶ್ರೇಯಸ್‌ ಪಟೇಲ್‌ರನ್ನು ಗೆಲ್ಲಿಸಿ ಎರಡು ಕಣ್ಣುಗಳಾಗಿ ಶಕ್ತಿ ಕೊಟ್ಟಿದ್ದಾರೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಾಸನದ ಜನತೆ ಶಿವಲಿಂಗೇಗೌಡ, ಶ್ರೇಯಸ್‌ ಪಟೇಲ್‌ರನ್ನು ಗೆಲ್ಲಿಸಿ ರಾಜ್ಯಕ್ಕೆ ಎರಡು ಕಣ್ಣುಗಳಾಗಿ ಶಕ್ತಿ ಕೊಟ್ಟಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಇಂದು ಅರಸೀಕೆರೆಯ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಅರಸೀಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.

- Advertisement - 

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ 136 ಸ್ಥಾನಗಳನ್ನು ಗೆದ್ದಾಗ ಕೆ.ಎಂ.ಶಿವಲಿಂಗೇಗೌಡ ಅವರನ್ನು  ಮತ್ತು ಲೋಕಸಭಾ ಚುನಾವಣೆಯಲ್ಲಿ ಶ್ರೇಯಸ್‌ ಪಟೇಲ್ ಅವರನ್ನು ಗೆಲ್ಲಿಸಿ  ರಾಜ್ಯಕ್ಕೆ ಎರಡು ಕಣ್ಣುಗಳಾಗಿ ಹಾಸನದ ಜನತೆ ನಮಗೆ ಶಕ್ತಿಯನ್ನು ಕೊಟ್ಟಿದ್ದೀರಿ.

ಕ್ಷೇತ್ರದಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್, ಮೊರಾರ್ಜಿ ದೇಸಾಯಿ ಶಾಲೆಗಳನ್ನು ನಿರ್ಮಿಸಿ, ಶೈಕ್ಷಣಿಕ ಕ್ಷೇತ್ರಕ್ಕೆ ಶಕ್ತಿ ನೀಡುತ್ತಾ  ಅರಸೀಕೆರೆ ಕ್ಷೇತ್ರದ ಅಭಿವೃದ್ಧಿಗಾಗಿ ವಿವಿಧ ಕೆಲಸಗಳನ್ನು ಶಿವಲಿಂಗೇಗೌಡ ಅವರು ಮಾಡುತ್ತಿದ್ದಾರೆ ಎಂದು ಶಿವಕುಮಾರ್ ತಿಳಿಸಿದರು.

- Advertisement - 

ಮಹಾಭಾರತದಲ್ಲಿ ಭೀಷ್ಮ, ಧರ್ಮರಾಯನಿಗೆ ಒಂದು ಮಾತು ಹೇಳುತ್ತಾನೆ. ತಂದೆ ತಾಯಿ ಋಣ, ದೇವರ ಋಣ, ಗುರುವಿನ ಋಣ, ಸಮಾಜದ ಋಣ. ಈ ಋಣಗಳನ್ನು ಧರ್ಮದಿಂದ ತೀರಿಸಬೇಕು ಎಂದು ಹೇಳುತ್ತಾನೆ.

 ಜನಪರ ಕಾರ್ಯಗಳನ್ನು ಮಾಡುತ್ತಾ ಶಿವಲಿಂಗೇಗೌಡರು ಸಮಾಜದ ಋಣವನ್ನು ತೀರಿಸುವ ಕೆಲಸ ಮಾಡುತ್ತಿದ್ದಾರೆ. ಮರಕ್ಕೆ ಬೇರು ಎಷ್ಟು ಮುಖ್ಯವೋ ಮನುಷ್ಯನಿಗೆ ನಂಬಿಕೆ ಕೂಡ ಅಷ್ಟೇ ಮುಖ್ಯ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಜಿಲ್ಲೆಯಲ್ಲಿ 7ಕ್ಕೆ 7 ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ವಿಶ್ವಾಸ ನಮಗಿದೆ.

ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಒಂದು ಮಾತು ಹೇಳುತ್ತಿದ್ದೆ. ಕಮಲ ಕೆರೆಯಲ್ಲಿದ್ದರೇ ಚಂದ, ತೆನೆ ಹೊಲದಲ್ಲಿದ್ದರೇ ಚಂದ, ದಾನ ಧರ್ಮ ಮಾಡೋ ಕೈ ಅಧಿಕಾರದಲ್ಲಿದ್ದರೆ ಚಂದ. ರಾಜ್ಯದ ಜನರು ನಮಗೆ ಅಧಿಕಾರ ಕೊಟ್ಟು ವಿಧಾನಸೌಧದಲ್ಲಿ ಕೂರಿಸಿದ್ದಾರೆ. ನುಡಿದಂತೆ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಜನರ ಜೀವನದಲ್ಲಿ ಬದಲಾವಣೆ ತರುತ್ತಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ. ರಾಜ್ಯದಲ್ಲಿ 2028 ರಲ್ಲಿ ನಿಮ್ಮದೇ ಗ್ಯಾರಂಟಿ ಸರ್ಕಾರ ಆಡಳಿತದಲ್ಲಿ ಇರುವುದು ನಿಶ್ಚಿತ ಎಂದು ಡಿಕೆ ಶಿವಕುಮಾರ್ ಹೇಳಿದರು.

 

 

Share This Article
error: Content is protected !!
";