ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರು, ಯುವಕ, ಯುವತಿಯರು ಸದ್ಭಳಕೆ ಮಾಡಿಕೊಂಡು ಜೀವನ ಹಸನಾಗಿಸಿಕೊಂಡು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ, ಉದ್ಯೋಗ ಹುಡುಕಲು, ಉನ್ನತ ವ್ಯಾಸಂಗಕ್ಕೆ ಅನುಕೂಲವಾಗಲಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಶಿವಣ್ಣ ಹೇಳಿದರು.
ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ಬುಧವಾರ ಕಾಲೇಜು ಶಿಕ್ಷಣ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಯುವನಿಧಿ ಅರಿವು ಕಾರ್ಯಕ್ರಮ”ಉದ್ಘಾಟಿಸಿ ಅವರು ಮಾತನಾಡಿದರು.
2024-25ನೇ ಸಾಲಿನಲ್ಲಿ ಪದವಿ ಮತ್ತು ಡಿಪ್ಲೋಮಾ ವೃತ್ತಿಪರ ತರಬೇತಿ ಪಡೆದ ನಿರುದ್ಯೋಗಿ ವಿದ್ಯಾರ್ಥಿಗಳು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಚಿತ್ರದುರ್ಗ ಜಿಲ್ಲೆಯಲ್ಲಿ ಮೇ ಅಂತ್ಯಕ್ಕೆ. 6767 ಮಂದಿ ಈ ಯೋಜನೆಯ ಪ್ರಯೋಜನ ಪಡೆದಿದ್ದು, ಮೇ-2025 ಮಾಹೆಯವರೆಗೆ ಜಿಲ್ಲೆಯಲ್ಲಿ ಒಟ್ಟು ರೂ.15,23,13,000 (15 ಕೋಟಿ 23ಲಕ್ಷದ 13 ಸಾವಿರ) ರೂಗಳನ್ನು ಡಿಬಿಟಿ ಮೂಲಕ ಸಂದಾಯ ಮಾಡಲಾಗಿದೆ. ಎಂದು ತಿಳಿಸಿದರು.
ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೆಚ್.ಟಿ ಹನುಮಂತಪ್ಪ ಮಾತನಾಡಿ, ಯುವನಿಧಿ ಯೋಜನೆಯು ಯುವಕ-ಯುವತಿಯರಿಗೆ ಮುಂದಿನ ಭವಿಷ್ಯಕ್ಕೆ ಉಜ್ವಲವಾಗಲಿದ್ದು, ಮುಂದಿನ ದಿನಗಳಲ್ಲಿ ಬಹಳ ಉಪಯೋಗವಾಗಿದೆ ಎಂದು ಯುವನಿಧಿ ಯೋಜನೆಯ ಬಗ್ಗೆ ತಿಳಿಸಿದರು. ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಪಾಂಡುರಂಗಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಮಾಧುರ್ಯ, ಸಮಿತಿಯ ಸದಸ್ಯರಾದ ಶಿವಕುಮಾರ್, ಅಬ್ದುಲ್ ಶಾ ವಲಿ, ಎಸ್.ಟಿ.ರಂಗಸ್ವಾಮಿ, ದೇವೆಂದ್ರಪ್ಪ, ಪುರುಷತ್ತೋಮ, ಪುರಸಭೆ ಸದಸ್ಯರಾದ ಮಂಜುನಾಥ, ಪವನ್, ಉದ್ಯೋಗ ವಿನಿಮಯ ಕಚೇರಿಯ ಸಿಬ್ಬಂದಿ ಬಸವರಾಜ್ ಮತ್ತು ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಇದ್ದರು.