ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ತೂಬಗೆರೆ ಹೋಬಳಿ ಕೊಂಡಸಂದ್ರ ಗ್ರಾಮದ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಮಹಾಶಿವರಾತ್ರಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಪ್ರಾತಃಕಾಲ ಮಹಾರುದ್ರಾಭಿಷೇಕ, ವಿಶೇಷ ಪೂಜೆ ಅಲಂಕಾರಗಳೊಂದಿಗೆ ಪ್ರಾರಂಭವಾದ ಕಾರ್ಯಕ್ರಮಗಳು ಸಂಜೆ ಜಾಗರಣೆ ಅಖಂಡ ಭಜನೆ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ತೆರೆಗೊಳ್ಳಲಿದೆ. ಆಗಮಿಸಿದ ಭಕ್ತಾದಿಗಳಿಗೆ ಪ್ರಸಾದ ವಿತರಣೆ ನಡೆಯಿತು. ಶಿವಭಕ್ತರು ಪಾಲ್ಗೊಂಡು ಸಂಪನ್ನಗೊಂಡರು.