ತೇರುಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ವಿಶೇಷ ಪೂಜೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಹಿರಿಯೂರು :
ನಗರದ ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿ ದೇವಾಲಯದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಇದರ ಅಂಗವಾಗಿ ಮುಂಜಾನೆಯೇ ಸ್ವಾಮಿಗೆ ಪುಷ್ಪಾರ್ಚನೆ ಪಂಚಾಮೃತ ಅಭಿಷೇಕ ರುದ್ರಾಭಿಷೇಕ ವಿವಿಧ ಪೂಜಾ ಕಾರ್ಯಕ್ರಮ ನಡೆಯಿತು.

ಭಕ್ತಾದಿಗಳು ಸರತಿಯ ಸಾಲಿನಲ್ಲಿ ಬಂದು ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ದರ್ಶನ ಭಾಗ್ಯವನ್ನು ಪಡೆದರು ಮುಂಜಾನೆಯಿಂದ ಬರುತ್ತಿರುವ ಭಕ್ತರಿಗೆ ತೀರ್ಥ ಪ್ರಸಾದ ವಿನಿಯೋಗ ನಡೆಯುತ್ತಿದೆ ದೇವಾಲಯವನ್ನು ವಿವಿಧ ಹೂವುಗಳಿಂದ ಅಲಂಕರಿಸಲಾಗಿದ್ದು  ದೇವಾಲಯ ಶಿಖರ ಹಾಗೂ ದೀಪ ಸ್ತಂಭಕ್ಕೆ ಝಘ ಮಘಿಸುವ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದ್ದು ನೋಡುಗರ ಕಣ್ಮನ ಸೆಳೆಯುತ್ತಿದೆ.

- Advertisement - 

 

 

- Advertisement - 

Share This Article
error: Content is protected !!
";