ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ದೇವರಿಗೆ ಬೆಳಗ್ಗೆ ಅಭಿಷೇಕ ಹಾಗೂ ವಿಶೇಷ ಅಲಂಕಾರ ನಂತರ ಮಹಾಮಂಗಳಾರತಿ ಏರ್ಪಡಿಸಲಾಗಿತ್ತು.
ಪ್ರಧಾನ ಅರ್ಚಕರಾದ ಆರ್ ಸುಬ್ರಹ್ಮಣ್ಯರವರು ಪ್ರಧಾನ ಅರ್ಚಕರು ಶ್ರೀನಿಧಿ ರವರಿಗೆ ಅಧಿಕಾರ ಹಸ್ತಾಂತರ ಮಾಡಿದರು ಈ ಸಂದರ್ಭದಲ್ಲಿ ದೇವಾಲಯದ ಕಾರ್ಯದರ್ಶಿ ಎಂ ನಾರಾಯಣಸ್ವಾಮಿ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ಹಾಗೂ ದೇವಾಲಯದ ಸಿಬ್ಬಂದಿ ಹಾಜರಿದ್ದರು. ದೇವಾಲಯಕ್ಕೆ ಬಂದ ಭಕ್ತಾದಿಗಳಿಗೆ ಬೇವುಬೆಲ್ಲ ಹಂಚಲಾಯಿತು.