ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲ್ಲೂಕಿನ ತೂಬಗೆರೆ ಹೋಬಳಿ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಕುಟುಂಬ ಸಮೇತರಾಗಿ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಭೇಟಿ ದೇವರ ದರ್ಶನ ಪಡೆದರು.
ಇತ್ತೀಚೆಗಷ್ಟೇ ದೊಡ್ಡಬಳ್ಳಾಪುರ ಕಂದಾಯ ಇಲಾಖೆ ಉಪ ನೋಂದಣಾಧಿಕಾರಿ ಕಚೇರಿಗೆ ಭೇಟಿ ಕೊಟ್ಟು ಅಲ್ಲಿನ ಅಧಿಕಾರಿಗಳ ಬೇಜವಾಬ್ದಾರಿ ತಿಳಿದು ಅಧಿಕಾರಿಗಳಿಗೆ ಚಳಿ ಬಿಡಿಸಿ ಹೋಗಿದ್ದರು.
ಬೆಳ್ಳಂಬೆಳಗ್ಗೆ ಶ್ರೀಕ್ಷೇತ್ರ ಘಾಟಿ ಕ್ಷೇತ್ರಕ್ಕೆ ಭೇಟಿ ಕೊಟ್ಟು ದೇವರಿಗೆ ಅಭಿಷೇಕ ಪೂಜಾದಿಗಳೂಂದಿಗೆ ಮಂಗಳಾರತಿ ಪಡೆದು ಅಲ್ಲಿನ ವ್ಯವಸ್ಥೆಗಳ ಬಗ್ಗೆ ಗಮನಹರಿಸಿ ಹಿಂತಿರುಗಿದರು.