ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ 2024ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ರಾಷ್ಟ್ರ ಮಟ್ಟದಲ್ಲಿ ಅಕ್ಟೋಬರ್ 17 ರಂದು ಬೆಳಿಗ್ಗೆ 9.30 ಕ್ಕೆ ಶಾಸಕರ ಭವನದ ಆವರಣದಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು ನಂತರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಗಣ್ಯರು ಮತ್ತು ಸಾರ್ವಜನಿಕರು ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಮುಖಂಡರುಗಳು ಕಾರ್ಯಕ್ರಮದಲ್ಲಿ ಭಾಗÀವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.