ಪರಂಪರೆಯ ಪ್ರತೀಕ, ಅಧಿದೇವತೆ ಶ್ರೀ ಮಾರಿಯಮ್ಮ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯ ಕಾಪುವಿನ ಶ್ರೀಕ್ಷೇತ್ರ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಪ್ರತಿಷ್ಠಾನವು ಆಯೋಜಿಸಿದ್ದ ಬ್ರಹ್ಮಕಲಶೋತ್ಸವದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭಾಗವಹಿಸಿ ಕಾಪುವಿನ ಅಮ್ಮನ ದರ್ಶನಶೀರ್ವಾದವನ್ನು ಪಡೆದು ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.

17 ನೇ ಶತಮಾನದಲ್ಲಿ ಕೆಳದಿ ರಾಜ ಮನೆತನದ ಆರಾಧ್ಯ ದೈವವಾಗಿ ಅಂದಿನಿಂದ ಇಂದಿನವರೆಗೆ ಘಟಿಸಿದ ತಾಯಿಯ ಮಹಿಮೆಯನ್ನು ಅವರು ಸ್ಮರಿಸಿದರು.

- Advertisement - 

 ಈ ಸಂದರ್ಭದಲ್ಲಿ ವಜ್ರದೇಹಿ ಮಠದ ಪರಮಪೂಜ್ಯ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಸಂಸದರು ಹಾಗೂ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ರಾಜೇಶ್, ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕರಾದ ಹೆಚ್.ಪೂಂಜಾ, ಶಾಸಕರಾದ ಜಿ.ಸುರೇಶ್, ಡಾ.ವೈ ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್,

ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಡಾ. ಕೆ ಪ್ರಕಾಶ್ ಶೆಟ್ಟಿ, ಕಾರ್ಯಾಧ್ಯಕ್ಷ ಯೋಗೀಶ್ ಶೆಟ್ಟಿ, ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕರಾದ  ಅನಂತಕೃಷ್ಣ ಅಸ್ರಣ ಸೇರಿದಂತೆ ಇತರ ಗಣ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.

- Advertisement - 

 

 

Share This Article
error: Content is protected !!
";