ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕುಂಕುಮ ಕೇಸರಿ ಕಂಡರೆ ದ್ವೇಷ ಕಾರುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರು ಈಗ ಜನಿವಾರದ ವಿರುದ್ಧ ಹಗೆತನ ಮೆರೆಯುವ ಮೂಲಕ ಮತ್ತೊಮ್ಮೆ ತಮ್ಮ ಹಿಂದೂ ವಿರೋಧಿ ಮಾನಸಿಕತೆಯನ್ನ ಪ್ರದರ್ಶನ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ತೀರ್ಥಹಳ್ಳಿಯಲ್ಲಿ ಸಿಇಟಿ ಪರೀಕ್ಷೆ ವೇಳೆಯಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ಬಲವಂತವಾಗಿ ಜನಿವಾರ ತೆಗೆಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದರೆ, ಬೀದರ್ ನಲ್ಲಿ ಜನಿವಾರ ತೆಗೆಯಲೊಪ್ಪದ ವಿದ್ಯಾರ್ಥಿಯನ್ನು ಪರೀಕ್ಷೆಗೆ ಹಾಜರಾಗಲು ಬಿಡದೆ ವಿದ್ಯಾರ್ಥಿಯ ಭವಿಷ್ಯವನ್ನ ಹಾಳು ಮಾಡಿದೆ ಈ ಹಿಂದೂ ವಿರೋಧಿ ಕರ್ನಾಟಕ ಕಾಂಗ್ರೆಸ್ ಸರ್ಕಾರ.
ಬ್ರಾಹ್ಮಣ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಈ ಘಟನೆಗಳು ಅತ್ಯಂತ ಖಂಡನೀಯವಾಗಿದ್ದು, ಸಿಎಂ ಸಿದ್ದರಾಮಯ್ಯನವರು ರಾಜ್ಯದ ಜನತೆಯ ಕ್ಷಮೆ ಕೇಳಬೇಕು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಶೋಕ್ ಒತ್ತಾಯಿಸಿದ್ದಾರೆ.