ಸಿದ್ದರಾಮಯ್ಯ ಮತ್ತು ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಮಾಟ ಮಂತ್ರ

News Desk
- Advertisement -  - Advertisement - 

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಅವರು ಪ್ರತಿ ಶನಿವಾರ ಮತ್ತು ಭಾನುವಾರ ಜನರ ಸಮಸ್ಯೆ ಆಲಿಸಲು ಬೆಂಗಳೂರು ನಡಿಗೆ ಕಾರ್ಯಕ್ರಮ ಆಯೋಜಿಸಿ, ನಗರದ ಪ್ರಮುಖ ಪಾರ್ಕ್‌ಗಳಿಗೆ ತೆರಳುತ್ತಿದ್ದಾರೆ.

ಭಾನುವಾರ ಬೆಂಗಳೂರಿನ ಮತ್ತಿಕೆರೆಯ ಜೆಪಿ ಪಾರ್ಕ್‌ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ ನೀಡಿ ಸಾರ್ವಜನಿಕ ಸಂವಾದ ನಡೆಸಿದರು.

- Advertisement - 

ಆದರೆ ವೇದಿಕೆ ಮೇಲೆ ಆರ್.ಆರ್.ನಗರದ ಬಿಜೆಪಿ ಶಾಸಕ ಮುನಿರತ್ನ ಹೈಡ್ರಾಮಾ ಸೃಷ್ಟಿಸಿದ್ದಾರೆ. ಸ್ಥಳೀಯ ಶಾಸಕನಾದ ನನಗೆ ಆಹ್ವಾನ ನೀಡಿಲ್ಲ ಮತ್ತು ತನ್ನ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿ ವೇದಿಕೆಯಲ್ಲೇ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ವಿರುದ್ಧ ಮಾಟ ಮಂತ್ರ ಮಾಡಲಾಗಿದ್ದು, ಡಬ್ಬದಲ್ಲಿ ಹಾಕಿ ವಶೀಕರಣ ಮಾಡಿದ್ದಾರೆ. ಇದಕ್ಕಾಗಿ ಕೋಣ ಬಲಿ ಕೊಟ್ಟಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮಂಕಾಗಿದ್ದಾರೆ.

- Advertisement - 

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧವೂ ಮಾಟ ಮಂತ್ರ ಮಾಡಿದ್ದಾರೆ. ಅದಕ್ಕೆ ಅವರಿಗೆ ಆರೋಗ್ಯ ಸರಿಯಿಲ್ಲ ಎಂದು ಪರೋಕ್ಷವಾಗಿ ಡಿ.ಕೆ ಶಿವಕುಮಾರ್ ವಿರುದ್ಧ ಮುನಿರತ್ನ ಗಂಭೀರ ಆರೋಪ ಮಾಡಿದರು.

 

 

 

Share This Article
error: Content is protected !!
";