ದೇವರಾಜ ಅರಸು ಅವರ ದಾಖಲೆ ಮುರಿದ ಸಿದ್ದರಾಮಯ್ಯ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಅವರು ಪಾತ್ರರಾಗಲು ಕ್ಷಣಗಣನೆ ಆರಂಭವಾಗಿದೆ.
ಇಂದು ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲಿದ್ದಾರೆ. ಡಿ. ದೇವರಾಜ ಅರಸು
7 ವರ್ಷ 239 ದಿನಗಳ ಕಾಲ ಕರ್ನಾಟಕದ ಸಿಎಂ‌ಆಗಿದ್ದ‌ರು.

ಸಿದ್ದರಾಮಯ್ಯ ಕೂಡ ಜ.5ಕ್ಕೆ 7 ವರ್ಷ 239 ದಿನ ಪೂರೈಸಿದ್ದು ಜ.6ರಂದು ಅರಸು ದಾಖಲೆ ಮುರಿಯಲಿದ್ದಾರೆ.
ಮೂರನೇ ಸ್ಥಾನದಲ್ಲಿ ಎಸ್​. ನಿಜಲಿಂಗಪ್ಪ ಅವರಿದ್ದು
, 7 ವರ್ಷ 175 ದಿನಗಳ ಕಾಲ ಅವರು ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಬಳಿಕ 4ನೇ ಸ್ಥಾನದಲ್ಲಿ ರಾಮಕೃಷ್ಣ ಹೆಗಡೆ 5 ವರ್ಷ 216 ದಿನ ಮತ್ತು 5 ವರ್ಷ 82 ದಿ‌ನ ಸಿಎಂ ಆಗಿದ್ದ ಬಿ.ಎಸ್​. ಯಡಿಯೂರಪ್ಪ 5ನೇ ಸ್ಥಾನದಲ್ಲಿದ್ದಾರೆ.

- Advertisement - 

ದೇವರಾಜ ಅರಸು ಅವರು ಸತತವಾಗಿ ಏಳೂವರೆ ವರ್ಷ ಅಧಿಕಾರದಲ್ಲಿದ್ದರೆ ಸಿದ್ದರಾಮಯ್ಯ ಮೊದಲ ಅವಧಿ ಪೂರ್ಣಗೊಂಡ ಬಳಿಕ ಮತ್ತೆ ಕಾಂಗ್ರೆಸ್​​ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರಲಿಲ್ಲ.

2018ರ ವಿಧಾನ ಸಭಾ ಚುನಾವಣೆ ಫಲಿತಾಂಶ ಅತಂತ್ರವಾಗಿದ್ದ ಕಾರಣಕ್ಕೆ ಜೆಡಿಎಸ್-ಕಾಂಗ್ರೆಸ್​​ ಮೈತ್ರಿ ಸರ್ಕಾರ ರಚಿಸಿತ್ತು. ಕುಮಾರಸ್ವಾಮಿ ಅವರ ನೇತೃತ್ವದ ಸರ್ಕಾರ 14 ತಿಂಗಳಿಗೇ ಪತನವಾಗಿತ್ತು. ಬಳಿಕ ಅಧಿಕಾರಕ್ಕೆ ಬಂದ ಬಿಜೆಪಿಯಿಂದ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಕ್ರಮವಾಗಿ ಮುಖ್ಯಮಂತ್ರಿಗಳಾಗಿದ್ದರು. ಅದಾದ ಬಳಿಕ 2023ರ ಚುನಾವಣೆಯಲ್ಲಿ ಕಾಂಗ್ರೆಸ್​​ ಸ್ಪಷ್ಟ ಬಹುಮತ ಪಡೆದ ಕಾರಣ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಿ 2ನೇ ಅವಧಿಗೆ ಅಧಿಕಾರ ಸ್ವೀಕರಿಸಿದ್ದರು.

- Advertisement - 

ಬಜೆಟ್​​ ಮಂಡನೆಯಲ್ಲೂ ದಾಖಲೆ ಸೃಷ್ಠಿ-
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಮೊದಲು ಲೋಕದಳ
, ಜನತಾ ದಳ ಪಕ್ಷಗಳಲ್ಲೂ ಇದ್ದರು. ಸಿದ್ದರಾಮಯ್ಯ 2006ರಲ್ಲಿ ಕಾಂಗ್ರೆಸ್​​ ಸೇರಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದಾರೆ. ವಿಪಕ್ಷ ನಾಯಕನಿಂದ ಹಿಡಿದು ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಸರ್ಕಾರ ನಡೆಸುತ್ತಿದ್ದಾರೆ. ರಾಜ್ಯ ಬಜೆಟ್ ಮಂಡನೆಯಲ್ಲೂ ಸಿಎಂ ಸಿದ್ದರಾಮಯ್ಯ ದಾಖಲೆ ಬರೆದಿದ್ದು, ಇದುವರೆಗೂ 16 ಬಜೆಟ್ ಮಂಡಿಸಿದ್ದಾರೆ. ಒಟ್ಟು 13 ಬಜೆಟ್​​ ಮಂಡಿಸಿರುವ ರಾಮಕೃಷ್ಣ ಹೆಗಡೆ ಎರಡನೇ ಸ್ಥಾನದಲ್ಲಿದ್ದಾರೆ.

ಶುಭಾಶಯ ಕೋರಿ ಬ್ಯಾನರ್​-
ಮುಖ್ಯಮಂತ್ರಿಯಾಗಿ ಅತಿ ಹೆಚ್ಚು ಬಜೆಟ್ ಮಂಡಿಸಿ ವಿಶಿಷ್ಟ ದಾಖಲೆ ಬರೆದಿರುವ ಸಿದ್ದರಾಮಯ್ಯನವರು ಅವರ ಅಭಿಮಾನಿಗಳು ಮತ್ತು ಬೆಂಬಲಿಗರಿಂದ ಸಂಭ್ರಮಾಚರಣೆಗೆ ಅದಾಗಲೇ ತಯಾರಿ ನಡೆದಿದೆ.
ದೀರ್ಘವಧಿ ಸಿಎಂ ಆಗಿ ದಾಖಲೆ ಬರೆದ ಸಿದ್ದರಾಮಯ್ಯ ಎಂದು ಶುಭಾಶಯ ಕೋರಿರುವ ಪೋಸ್ಟರ್​​ನ ಅಭಿಮಾನಿಗಳು ಮುಖ್ಯಮಂತ್ರಿಗಳ ನಿವಾಸದ ಬಳಿ ಹಾಕಿದ್ದಾರೆ. ಕಾವೇರಿ ನಿವಾಸದ ಎದುರಿಗಿನ ಸರ್ಕಲ್ ಬಳಿ ಬ್ಯಾನರ್​​ ರಾರಾಜಿಸುತ್ತಿದೆ.

 

Share This Article
error: Content is protected !!
";