ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ಬಿಸಿ ಜನಸಾಮಾನ್ಯರಿಗೆ ತಟ್ಟುತ್ತಿದೆ. ಕಳೆದ ಎರಡು ತಿಂಗಳಿನಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆ ಬಸ್ ಪ್ರಯಾಣ ದರ, ಮೆಟ್ರೋ ಪ್ರಯಾಣ ದರ, ಹಾಲು, ವಿದ್ಯುತ್ ಬಿಲ್, ನೀರಿನ ದರ ಏರಿಕೆಯಾಗಿದ್ದು ಜನಸಾಮಾನ್ಯರ ಬದುಕು ಮೂರಾಬಟ್ಟೆಯಾಗುತ್ತಿದೆ ಎಂದು ಬಿಜೆಪಿ ಆತಂಕ ವ್ಯಕ್ತಪಡಿಸಿದೆ.
ಕರ್ನಾಟಕ ಕಾಂಗ್ರೆಸ್ ಗ್ಯಾರಂಟಿಗಳಿಂದಾಗಿ ಕರ್ನಾಟಕ ರಾಜ್ಯವು ದೇಶದಲ್ಲೇ ಅತ್ಯಂತ ದುಬಾರಿ ರಾಜ್ಯವಾಗುತ್ತಿದೆ. ಗಾಳಿ ಒಂದನ್ನು ಬಿಟ್ಟು ಉಳಿದೆಲ್ಲದಕ್ಕೂ ರಾಜ್ಯ ಸರ್ಕಾರ ತೆರಿಗೆ ವಿಧಿಸುತ್ತಿದೆ, ಬೆಲೆ ಏರಿಕೆ ಮಾಡುತ್ತಿದೆ. ಎಲ್ಲಾ ಅಗತ್ಯ ಸರಕು – ಸೇವೆಗಳ ಬೆಲೆ ಏರಿಸಿ ದುಡಿಯುವ ವರ್ಗದ ಜನರ ರಕ್ತವನ್ನು ಸಿದ್ದರಾಮಯ್ಯ ಸರ್ಕಾರ ಹೀರುತ್ತಿದೆ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.
ಜನಸಾಮಾನ್ಯರು ಮುಟ್ಟಿದ್ದಕ್ಕೆಲ್ಲಾ ದರ ಏರಿಕೆ ಮಾಡುತ್ತಿರುವುದು ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಯ ವಿರುದ್ಧ ರಾಜ್ಯದ ಜನತೆ ಬೀದಿಗಿಳಿಯುವುದು ನಿಶ್ಚಿತ ಎಂದು ಬಿಜೆಪಿ ಎಚ್ಚರಿಸಿದೆ.