ದಿವಾಳಿಯತ್ತ ಸಾಗಿದ ಸಿದ್ದರಾಮಯ್ಯ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಹದಗೆಟ್ಟ ಆರ್ಥಿಕ ಸ್ಥಿತಿ ದಿವಾಳಿಯತ್ತ ಸಾಗಿರುವುದನ್ನು ಸ್ವತಃ ಕಾಂಗ್ರೆಸ್ ಶಾಸಕರೇ ಸಾರಿ ಹೇಳುತ್ತಿದ್ದಾರೆ. ಆಡಳಿತ ಪಕ್ಷದ ಶಾಸಕ ರಾಜು ಕಾಗೆ ಬಳಿಕ ಇದೀಗ ವಿಜಯನಗರ ಶಾಸಕ ಗವಿಯಪ್ಪ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಕಳೆದರೂ ನಮ್ಮ ಕ್ಷೇತ್ರಕ್ಕೆ ಅನುದಾನ ನೀಡುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಅಸಮಾಧಾನಗೊಂಡು ಕಣ್ಣೀರು ಹಾಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರದ ಅನುದಾನದಲ್ಲೇ ಕೆಲಸ ಮಾಡುತ್ತಿದ್ದೇವೆ ಎಂದು ಕಣ್ಣೀರು ಹಾಕುತ್ತಿರುವುದು ಸಿಎಂ ಸಿದ್ದರಾಮಯ್ಯನವರ ಸರ್ಕಾರದ ಆರ್ಥಿಕ ದುಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ದೂರಿದ್ದಾರೆ.

ಆಡಳಿತ ಪಕ್ಷ ಕಾಂಗ್ರೆಸ್ ಪಕ್ಷದ ಬಹುತೇಕ ಶಾಸಕರು ಒಳಗೊಳಗೇ ಕುದಿಯುತ್ತಿದ್ದಾರೆ, ಇದು ಯಾವಾಗ ಆಸ್ಪೋಟಗೊಳ್ಳುವುದೋ ಗೊತ್ತಿಲ್ಲ,

ಆದರೆ ರಾಜ್ಯದ ಅಭಿವೃದ್ಧಿ ಹಾಗೂ ಜನ ಕಲ್ಯಾಣದ ಕಾರ್ಯಗಳಂತೂ ಮೂಲೆ ಸೇರಿರುವುದು ಜನಸಾಮಾನ್ಯರು ಹಾದಿ ಬೀದಿಯಲ್ಲಿ ನಿಂತು ಹಿಡಿಶಾಪ ಹಾಕುವಂತಾಗಿದೆ ಎಂದು ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

Share This Article
error: Content is protected !!
";