ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನ ಕೆ.ಆರ್. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಮೂಲಕ ಜಿಲ್ಲೆಯ ಇತಿಹಾಸವನ್ನು ತಿರುಚಲಾಗುತ್ತಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರು ಟೀಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,
ಅಲ್ಲಿನ ಜನರ ಜನಾಭಿಪ್ರಾಯವನ್ನು ಪಡೆದೇ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕುಮಾರಸ್ವಾಮಿಯವರು ರಾಮನಗರ ಜಿಲ್ಲೆ ಸೃಜಿಸುವಾಗ, ಅಲ್ಲಿನ ಇತಿಹಾಸದ ಬಗ್ಗೆ ಯೋಚಿಸಿರಲಿಲ್ಲವೇ ಎಂದು ಮರುಪ್ರಶ್ನಿಸಿದರು.