ಮುಡಾ ಸುಳ್ಳು ಆರೋಪಕ್ಕೆ ಸತ್ಯ ತಿಳಿಸಿದ್ದೇನೆ -ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಮೈಸೂರು:
ಮುಡಾಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ಸುಳ್ಳು  ಪ್ರಕರಣ ದಾಖಲಿಸಲಾಗಿದ್ದು
, ಲೋಕಾಯುಕ್ತ ವಿಚಾರಣೆಯಲ್ಲಿ ಸತ್ಯವನ್ನು ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement - 

ಅವರು ಮೈಸೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿಗಳು ಲೋಕಾಯುಕ್ತ ವಿಚಾರಣೆಯನ್ನು ಎದುರಿಸಿದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಲೋಕಾಯುಕ್ತ ವಿಚಾರಣೆಗೆ ಇಂದು ಹಾಜರಾಗಿದ್ದು, ಅವರ ಪ್ರಶ್ನೆಗಳಿಗೆ ಸೂಕ್ತ ಉತ್ತರವನ್ನು ನೀಡಿದ್ದೇನೆ.

- Advertisement - 

ಬಿಜೆಪಿಯವರು ಗೋಬ್ಯಾಕ್ ಸಿಎಂ ಎಂಬ ಪ್ರತಿಭಟನೆ ನಡೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸ್ನೇಹಮಯಿ ಕೃಷ್ಣ ಅವರು ಕೋರಿದಂತೆ,ರಾಜ್ಯಪಾಲರು ಆದೇಶದಂತೆ ಲೋಕಾಯುಕ್ತ ವಿಚಾರಣೆಯನ್ನು ನಡೆಸಲಾಗಿದೆ. ಬಿಜೆಪಿಯವರು ವಿಚಾರಣೆಯ ವಿರುದ್ಧವಾಗಿದ್ದಾರೆ ಎಂಬ ಅರ್ಥವಲ್ಲವೇ? ಇದರಿಂದ ಈ ಆರೋಪ ಸುಳ್ಳು ಎಂದು ಸ್ಪಷ್ಟವಾಗುತ್ತದೆ ಎಂದರು.

  ವಿಚಾರಣೆ ನಡೆಸುವ ಲೋಕಾಯುಕ್ತ ನಂಬಿಕೆಯಿಲ್ಲ, ತನಿಖೆಯನ್ನು ಸಿಬಿಐ ನವರು ನಡೆಸಬೇಕೆಂಬ ಬಿಜೆಪಿಯವರ ಬೇಡಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿಕೇಂದ್ರ ಸರ್ಕಾರದಲ್ಲಿ ಸಿಬಿಐ ಇದೆ. ಬಿಜೆಪಿಯವರು ಇದುವರೆಗೆ ಯಾವುದಾದರೂ ಹಗರಣವನ್ನು ಸಿಬಿಐ ಗೆ ವಹಿಸಿದ್ದಾರೆಯೇ? ಎಂದರು.

- Advertisement - 

Share This Article
error: Content is protected !!
";