ಅನಿಲ ಪೂರೈಕೆಗೆ ಪರ್ಯಾಯ ಮಾರ್ಗ ಹುಡುಕಲು ಕೇಂದ್ರಕ್ಕೆ ಪತ್ರ ಬರೆದ ಸಿದ್ದರಾಮಯ್ಯ

News Desk
- Advertisement -  - Advertisement - 

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎಲ್‌ಪಿಜಿ ಅಭಾವವನ್ನು ನೀಗಿಸಲು ಹೊರದೇಶದಿಂದ ಅನಿಲ ಪೂರೈಕೆಯಂತಹ ಪರ್ಯಾಯ ಮಾರ್ಗಕ್ಕೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ವಿಧಾನಮಂಡಲದಲ್ಲಿ ಸರ್ಕಾರದ ವತಿಯಿಂದ ಈ ಬಗ್ಗೆ ಈಗಾಗಲೇ ಉತ್ತರ ನೀಡಲಾಗಿದೆ. ಆಹಾರಕ್ಕಾಗಿ ಹೋಟೆಲ್ ಗಳ ಮೇಲೆ ಅವಲಂಬಿತರಾಗುವ ಜನಸಂಖ್ಯೆ ಸಾಕಷ್ಟಿದೆ. ಹೋಟೆಲ್ ವ್ಯವಸ್ಥೆ ಸ್ಥಗಿತಗೊಂಡರೆ, ಜನಜೀವನ ಅಸ್ತವ್ಯಸ್ಥವಾಗುತ್ತದೆ. ಕೇಂದ್ರ ಸಚಿವ ಹರ್‌ದೀಪ್ ಸಿಂಗ್ ಪುರಿಯವರು ಎಲ್ ಪಿ ಜಿ ಪೂರೈಕೆಯಲ್ಲಿ ತೊಂದರೆಯಾಗದಂತೆ ಪರಿಸ್ಥಿತಿ ನಿರ್ವಹಿಸುವ ಭರವಸೆ ನೀಡಿದ್ದಾರೆ.

- Advertisement - 

ಕರ್ನಾಟಕದಲ್ಲಿ ಮಾತ್ರ ಎಲ್ ಪಿ ಜಿ ಪೂರೈಕೆಯಲ್ಲಿ‌ಸಮಸ್ಯೆ ಎದುರಾಗಿರುವುದಲ್ಲ, ದೇಶದ ಎಲ್ಲ ಕಡೆಯೂ ಇದೇ ಪರಿಸ್ಥಿತಿ ಇದೆ. ರಾಜ್ಯ ಬಿಜೆಪಿಯವರು ಅರ್ಥವಿಲ್ಲದಂತೆ ಮಾತನಾಡುವ ಬದಲು, ಎಲ್ ಪಿ ಜಿ ಹೆಚ್ಚಿನ ಸರಬರಾಜಿಗೆ ಕ್ರಮ ವಹಿಸಲು ಕೇಂದ್ರವನ್ನು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

 

- Advertisement - 

 

 

Share This Article
error: Content is protected !!
";