ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿಸಿದ್ದರಾಮಯ್ಯ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲ ಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವಿಜ್ಞಾನ & ತಂತ್ರಜ್ಞಾನ ಮತ್ತು ಸಣ್ಣ ನೀರಾವರಿ ಇಲಾಖೆ, ಜಲಸಂಪನ್ಮೂಲ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳ ಜೊತೆ 2026-27ನೇ ಸಾಲಿನ ಆಯವ್ಯಯ ಪೂರ್ವಸಭೆ ನಡೆಸಿ, ಇಲಾಖೆಯ ಅನುದಾನದ ಬೇಡಿಕೆ ಸ್ವೀಕರಿಸಿ, ನೂತನ ಕಾರ್ಯಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಜ್ಞಾನ & ತಂತ್ರಜ್ಞಾನ ಮತ್ತು ಸಣ್ಣ ನೀರಾವರಿ ಇಲಾಖೆ ಸಚಿವ ಬೋಸರಾಜ್, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ, ಶಾಸಕ ಬಿ.ಆರ್.ಪಾಟೀಲ್,
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಸೇರಿದಂತೆ ಆರ್ಥಿಕ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

