ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ವಿವಿಧ ಇಲಾಖೆಗಳ ಸಭೆ ನಡೆಸಿದ ಸಿದ್ದರಾಮಯ್ಯ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2026-27
ನೇ ಸಾಲಿನ ಬಜೆಟ್‌ಗೆ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸಣ್ಣ ಕೈಗಾರಿಕಾ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳ ಜೊತೆ ಸಭೆ ನಡೆಸಿ, ಇಲಾಖೆಯ ಅನುದಾನದ ಬೇಡಿಕೆ, ಕಾರ್ಯಕ್ರಮಗಳ ನೀಲನಕ್ಷೆಯ ಮಾಹಿತಿ ಪಡೆದರು.

ಸಭೆಯಲ್ಲಿ ಸಣ್ಣ ಕೈಗಾರಿಕೆ ಇಲಾಖೆ ಸಚಿವ ಶರಣಬಸಪ್ಪ ದರ್ಶನಾಪುರ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹಾದೇವಪ್ಪ, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ, ಶಾಸಕ ಬಿ.ಆರ್.ಪಾಟೀಲ್,

- Advertisement - 

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಸೇರಿದಂತೆ ಆರ್ಥಿಕ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement - 
Share This Article
error: Content is protected !!
";