ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಕರ್ನಾಟಕದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ “ಸುವರ್ಣ ಮಹೋತ್ಸವ”, ಮಕ್ಕಳ ದಿನಾಚರಣೆ,
ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ, ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗಳು ಹಾಗೂ ಗೃಹಲಕ್ಷ್ಮಿ ಸಹಕಾರ ಆ್ಯಪ್ ಅನ್ನು ಲೋಕಾರ್ಪಣೆಗೊಳಿಸಿದರು.
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವರುಗಳಾದ ಲಕ್ಷ್ಮೀ ಹೆಬ್ಬಾಳ್ಕರ್, ಹೆಚ್.ಸಿ ಮಹಾದೇವಪ್ಪ, ಕೆ.ಎಚ್.ಮುನಿಯಪ್ಪ, ಈಶ್ವರ್ ಖಂಡ್ರೆ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

