ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತನ್ನದೇ ಕೈ ಕೆಳಗಿನ ಅಧಿಕಾರಿಗಳಿಂದ ತನಿಖೆ ನಡೆಸಿ ಎಸ್.ಐ.ಟಿ. ಹಾಗೂ ಲೋಕಾಯುಕ್ತ ಸಂಸ್ಥೆಯಿಂದ ಕ್ಲೀನ್‌ಚಿಟ್‌ಪಡೆದು ಸಿಎಂ ಸ್ಥಾನದಲ್ಲಿ ಮುಂದುವರಿಯಲು ಹವಣಿಸುತ್ತಿದ್ದ ಸಿದ್ದರಾಮಯ್ಯ ಅವರಿಗೆ ಇ.ಡಿ. ನೋಟಿಸ್‌ನಿಂದ ಮುಖಭಂಗವಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ಜಾರಿ ನಿರ್ದೇಶನಾಲಯ ಮುಡಾ ಸೈಟುಗಳನ್ನು ಮುಟ್ಟುಗೋಲು ಹಾಕಿಕೊಂಡ ಬಳಿಕ ಇದೀಗ ಸಿದ್ದರಾಮಯ್ಯ ಅವರ ಪತ್ನಿಗೆ ನೋಟಿಸ್ ನೀಡಿದೆ. ತನಿಖಾ ಸಂಸ್ಥೆಯಿಂದ ಸಿದ್ದರಾಮಯ್ಯ ಕುಟುಂಬ ಈಗ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮುಡಾ ಹಗರಣದಲ್ಲಿ ಜೈಲು ಕಂಬಿ ಎಣಿಸುವ ದಿನಗಳುಸಿದ್ದರಾಮಯ್ಯ ಅವರಿಗೆ ಹತ್ತಿರ ಬಂದಿದೆ ಎಂದು ಬಿಜೆಪಿ ಭವಿಷ್ಯ ನುಡಿದಿದೆ.
ಸಿದ್ದರಾಮಯ್ಯನವರೇ ಜೈಲಿಗೆ ಹೋಗುವ ಮುನ್ನ ರಾಜೀನಾಮೆ ಕೊಟ್ಟು ಮುಖ್ಯಮಂತ್ರಿ ಸ್ಥಾನದ ಘನತೆಯನ್ನು ಕಾಪಾಡಿ ಎಂದು ಬಿಜೆಪಿ ಸಲಹೆ ನೀಡಿದೆ.