ಸಿದ್ದರಾಮಯ್ಯನವರು ನಮ್ಮ ನಾಯಕರು, ಎಲ್ಲ ಚುನಾವಣೆಗೂ ಅವರು ಬೇಕು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಮಗೆ(ಕಾಂಗ್ರೆಸ್) ಸಿದ್ದರಾಮಯ್ಯ ಬೇಕು. ಅವರೇ ಇರಬೇಕು. ಹೊಸ ನಾಯಕ ತಯಾರಾಗುವ ತನಕ ಅವರ ಅವಶ್ಯಕತೆ ಮುಖ್ಯ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾರ್ಮಿಕವಾಗಿ ನುಡಿದರು.

ಬೆಂಗಳೂರಿನಲ್ಲಿ ಮಾತನಾಡಿದ ಶಿವಕುಮಾರ್, ಸಿದ್ದರಾಮಯ್ಯನವರು ನಮ್ಮ ನಾಯಕರು. ಅವರು ಮುಂದಿನ ಎಲ್ಲ ಚುನಾವಣೆಗೂ ಬೇಕು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಬಿಬಿಎಂಪಿ, ಅಸೆಂಬ್ಲಿ, ಪಾರ್ಲಿಮೆಂಟ್ ಚುನಾವಣೆಗೂ ಬೇಕು. ಅವರು ಕಾಂಗ್ರೆಸ್ ನಾಯಕ.

ಅವರನ್ನು ಕಾಂಗ್ರೆಸ್ ಪಕ್ಷ 2 ಬಾರಿ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ದಿನಾ ಬೆಳಗ್ಗೆದ್ದು ಅವರ ಹೆಸರು ಹೇಳಿಕೊಂಡು ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ. ಅದರ ಅವಶ್ಯಕತೆನೂ ಇಲ್ಲ. ಅವರು ನಮ್ಮ ಪ್ರಶ್ನಾತೀತ ನಾಯಕ ಎಂದು ಡಿಕೆ ಶಿವಕುಮಾರ್ ಹೇಳಿದರು.

ಡಿಸಿಎಂ ಡಿಕೆ ಶಿವಕುಮಾರ್​ ಬೆಂಗಳೂರಿನಲ್ಲಿ ಸಿಟಿ ರೌಂಡ್ಸ್​ ಮಾಡಿದ ಸಂದರ್ಭದಲ್ಲಿ ರಸ್ತೆ ಕಾಮಗಾರಿ ಪರಿಶೀಲನೆ ವೇಳೆ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಘೋಷಣೆ ಕೂಗಿದ್ದು ವಿಶೇಷವಾಗಿತ್ತು. ಆದರೆ ಅಭಿಮಾನಿಗಳ ಜೈಕಾರಕ್ಕೆ ಡಿಕೆ ಶಿವಕುಮಾರ್ ಕಿಡಿಗೊಡಲಿಲ್ಲ.

 

 

 

Share This Article
error: Content is protected !!
";