ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಸೂರಿನಲ್ಲಿ ಇಂದು ನಡೆಯಲಿರುವ ಸಮಾವೇಶದ ಬಗ್ಗೆ ಬಿಜೆಪಿಯವರು ಟೀಕೆ ಮಾಡಿಕೊಂಡು ತಿರುಗುತ್ತಿದ್ದಾರೆ. ಸುಮಾರು 2,600 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದ್ದು, ಬಿಜೆಪಿಯವರು ಯಾವ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.
ಬಿಜೆಪಿಯು ಕಾಂಗ್ರೆಸ್ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ಮೈಸೂರಿನಲ್ಲಿ ನಡೆಯುತ್ತಿರುವ ಸಮಾವೇಶವು ನಮ್ಮ ಸರ್ಕಾರ ಮಾಡಿರುವ ಜನಪರ ಕೆಲಸವನ್ನು ಜನರ ಮುಂದಿಡುವ ಕಾರ್ಯಕ್ರಮವಾಗಿದೆ.
ಮೈಸೂರು ಜಿಲ್ಲೆಯಲ್ಲಿ ಎರಡು ಕ್ಷೇತ್ರಗಳನ್ನು ನಮ್ಮ ಪಕ್ಷ ತನ್ನದಾಗಿಸಿಕೊಂಡಿದೆ. ಬಳಿಕ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳನ್ನು ಗೆದ್ದಿದ್ದೇವೆ. ಇಂದಿನ ಕಾರ್ಯಕ್ರಮ ಯಾರ ಶಕ್ತಿ ಪ್ರದರ್ಶನದ ಕಾರ್ಯಕ್ರಮವೂ ಅಲ್ಲ, ಅಭಿವೃದ್ಧಿಯ ಕಾರ್ಯಕ್ರಮ ಎಂದು ತಿಳಿಸಿದರು.