ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ನಿರ್ಗಮಿಸುವುದು ಖಚಿತವಾಗಿದೆ. ಹಾಗಾಗೇ ಅವರ ಸಂಪುಟದ ಹಿರಿಯ ಸಹೋದ್ಯೋಗಿಗಳು ಒಬ್ಬರ ನಂತರ ಮತ್ತೊಬ್ಬರು ಔತಣಕೂಟಗಳನ್ನು ಏರ್ಪಡಿಸಿ ಅವರಿಗೆ ವಿದಾಯ ಕೋರುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ವ್ಯಂಗ್ಯವಾಡಿದ್ದಾರೆ.
ಈಗಾಗಲೇ ಸಚಿವ ಸತೀಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಅವರಿಗೆ ಡಿನ್ನರ್ ಪಾರ್ಟಿ ಆಯೋಜಿಸಿದ್ದರು. ಈಗ ಗೃಹ ಸಚಿವ ಜಿ ಪರಮೇಶ್ವರ್ ಅವರು ಊಟಕ್ಕೆ ಕರೆದಿದ್ದಾರೆ.
ಮುಂದೆ ಡಿಕೆ ಶಿವಕುಮಾರ್ ಡಿನ್ನರ್ ಪಾರ್ಟಿ ಆಯೋಜಿಸಿದ ದಿನ ಸಿದ್ದರಾಮಯ್ಯ ಅವರ ಅಧಿಕಾರಾವಧಿ ಮುಗಿದಂತೆ ಎಂದು ಸೂಚ್ಯವಾಗಿ ಆರ್.ಅಶೋಕ್ ತಿಳಿಸಿದ್ದಾರೆ.
ಈಗಾಗಲೇ ಡಿಕೆ ಶಿವಕುಮಾರ್ ಅವರು ಸಿಎಂ ಸ್ಥಾನವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಅಂತ ಖುದ್ದು ಹೇಳಿದ್ದಾರೆಂದು ಅಶೋಕ ತಿಳಿಸಿದ್ದಾರೆ.