ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಭಾರತವನ್ನು ರೂಪಿಸುವಲ್ಲಿ ನಮ್ಮವರ ತ್ಯಾಗ, ಬಲಿದಾನವಿದೆ, ಸಂಘರ್ಷದ ಬದುಕಿದೆ ಎಂಬುದನ್ನು ಈ ದಿನ ಪ್ರತಿಯೊಬ್ಬರೂ ಸ್ಮರಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಜಾಪ್ರಭುತ್ವ ಕೇವಲ ಒಂದು ಸರ್ಕಾರವಲ್ಲ, ಅದು ಮಾನವೀಯ ಮೌಲ್ಯಗಳನ್ನು ಒಳಗೊಂಡ ಜೀವನ ಕ್ರಮ. ಜಾತಿ ಆಧಾರಿತ ತಾರತಮ್ಯವಿರುವ ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ಉಳಿದರಷ್ಟೇ ಬಹುಸಂಖ್ಯಾತರಿಗೆ ಬದುಕು.
ಪ್ರಜಾಪ್ರಭುತ್ವದಿಂದ ದೊರೆತ ಸ್ವಾತಂತ್ರ್ಯವನ್ನು, ಕಲಿತ ಮೌಲ್ಯಗಳನ್ನು, ಪಡೆದ ಅಧಿಕಾರವನ್ನು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಬಳಸೋಣ. ಸಂವಿಧಾನವನ್ನು ದುರ್ಬಲಗೊಳಿಸುವ ಪ್ರಜಾಪ್ರಭುತ್ವ ವಿರೋಧಿಗಳ ಕುತಂತ್ರವನ್ನು ಹಿಮ್ಮೆಟ್ಟಿಸೋಣ. ನಾಡಿನ ಸಮಸ್ತ ಜನರಿಗೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಶುಭಾಶಯಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

