ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಡಾ ಹಗರಣ ಪ್ರಕರಣದಲ್ಲಿ ಹಿಂದೆ ಡಿನೋಟಿಫಿಕೇಷನ್ ವೇಳೆ ಡಿಸಿಎಂ ಆಗಿದ್ದವರು ಯಾರು ? ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.
ಅರ್ಜಿಯಲ್ಲಿ ಡಿಸಿಎಂ ಎಂದು ಉಲ್ಲೇಖ ಮಾಡಿರುವ ಬಗ್ಗೆ ಲೋಕಾಯುಕ್ತ ನೀಡಿರುವ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆ ಅಶುದ್ಧ ಹಸ್ತ ಯಾರು ಸಿದ್ದರಾಮಯ್ಯ ಅವರೇ ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಕೇತಗಾನಹಳ್ಳಿಯಲ್ಲಿ ವಿನಾಕಾರಣ ಒತ್ತುವರಿ ಹೆಸರಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಪೊಲೀಸರನ್ನು ಬಳಸಿಕೊಂಡು ಅಮಾಯಕರಿಗೆ ಚಿತ್ರಹಿಂಸೆ ನೀಡುತ್ತಿದೆ ಎಂದು ಅವರು ಆರೋಪಿಸಿದರು.
ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರು, ಹೆಚ್.ಡಿ.ದೇವೇಗೌಡರ ಕುಟುಂಬದ ವಿರುದ್ಧ ದ್ವೇಷ ರಾಜಕಾರಣ ಮಾಡುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮುಂದುವರೆಯಲಿದೆ ಕೇಂದ್ರ ಉಕ್ಕು ಮತ್ತು ಬೃಹತ್‌ಕೈಗಾರಿಕೆ ಸಚಿವ ಕುಮಾರಸ್ವಾಮಿ ಎಚ್ಚರಿಸಿದರು.