ಮಾನವೀಯ ಮೌಲ್ಯ ಕಳೆದುಕೊಂಡ ಸಿದ್ದರಾಮಯ್ಯ?

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾನವೀಯ ಮೌಲ್ಯ ಕಳೆದುಕೊಂಡಿರಾ ಸಿದ್ದರಾಮಯ್ಯಅವರೇ? ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರಕ್‌ಹರಿದು 9 ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಜೆಡಿಎಸ್ ನೋವು ತೋಡಿಕೊಂಡಿದೆ.
ಈ ದುರ್ಘಟನೆಯಲ್ಲಿ ಬಹುತೇಕರು ಕಾಲೇಜು ವಿದ್ಯಾರ್ಥಿಗಳಾಗಿದ್ದು
, ಕುಟುಂಬಕ್ಕೆ ಆಸರೆಯಾಗಬೇಕಾಗಿದ್ದರು ಬಲಿಯಾಗಿದ್ದಾರೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ. 

ಮುಖ್ಯಮಂತ್ರಿಗಳೇ ತಾವು ಮಾನವೀಯತೆ, ಹೃದಯ ವೈಶಾಲ್ಯತೆ ತೋರಿ ಮೃತರ ಕುಟುಂಬದರವರಿಗೆ ತಲಾ 20 ಲಕ್ಷ ರೂ. ಪರಿಹಾರ ಕೊಡಬೇಕು ಎಂದು ಜೆಡಿಎಸ್ ಪಕ್ಷವು ಆಗ್ರಹಿಸುತ್ತದೆ. 

- Advertisement - 

ಆರ್‌ಸಿಬಿ ಕಾಲ್ತುಳಿತ ಪ್ರಕರಣದಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು 25 ಲಕ್ಷ ರೂ. ಪರಿಹಾರ ಘೋಷಿಸಿತ್ತು.

ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್‌ಗಾಂಧಿಯನ್ನು ಮೆಚ್ಚಿಸಲು ಕೇರಳದ ವ್ಯಕ್ತಿ ಆನೆ ದಾಳಿಯಿಂದ ಮೃತಪಟ್ಟಾಗ 15 ಲಕ್ಷ ರೂ. ಪರಿಹಾರ ನೀಡಲಾಗಿತ್ತು.   ವಯನಾಡಿನಲ್ಲಿ ದುರಂತವಾದಾಗ ಕರ್ನಾಟಕ ಸರ್ಕಾರದಿಂದ 10 ಕೋಟಿ ಪರಿಹಾರ ಘೋಷಿಸಲಾಗಿತ್ತು.

- Advertisement - 

ಕರ್ನಾಟಕ ಮುಖ್ಯಮಂತ್ರಿಗಳು ಹಾಸನದ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೂ ಮಾನವೀಯ ನೆಲೆಯಲ್ಲಿ ಇನ್ನೂ ಹೆಚ್ಚಿನ ಪರಿಹಾರ ಕೊಟ್ಟು, ಹೃದಯ ವೈಶಾಲ್ಯತೆ ತೋರಲಿ ಎಂದು ಜೆಡಿಎಸ್ ಆಗ್ರಹ ಮಾಡಿದೆ.

 

 

Share This Article
error: Content is protected !!
";