ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜಕೀಯ ಜೀವನದ ಸಂಧ್ಯಾ ಕಾಲದಲ್ಲಿರುವ ಸಿದ್ದರಾಮಯ್ಯ ಅವರು ಕುರ್ಚಿ ಉಳಿಸಿಕೊಳ್ಳಲು ಈಗ ಕೆಪಿಸಿಸಿ ಅಧ್ಯಕ್ಷ ಹುದ್ದೆಯಲ್ಲಿರುವ ಡಿಕೆಶಿ ಕುರ್ಚಿಗೆ ಡೈನಮೇಟ್ ಇಟ್ಟು ಮಜಾ ನೋಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಡಿ.ಕೆ.ಶಿವಕುಮಾರ್ ಅವರ ಸಿಎಂ ಕುರ್ಚಿ ಕನಸನ್ನು ಸಿದ್ದರಾಮಯ್ಯ ಅವರು ಕಮರಿಸುವ ಯತ್ನವನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್‌ಗೆ ಸೆಡ್ಡು ಹೊಡೆದು ಡಿಕೆಶಿ ವಿರುದ್ಧ ಕಾಂಗ್ರೆಸ್ ಸಚಿವರು ಮಾತನಾಡಲು ಆರಂಭಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿದ್ದರೂ ಡಿಕೆಶಿ ಅವರಿಗೆ ರಾಜ್ಯ ಕಾಂಗ್ರೆಸ್‌ಪಕ್ಷದಲ್ಲಿ ಈಗ ಕವಡೆ ಕಾಸಿನ ಕಿಮ್ಮತ್ತು ಇಲ್ಲದಂತಾಗಿದೆ. ಕೆಪಿಸಿಸಿ ಹುದ್ದೆಯಿಂದ ಡಿ. ಕೆ. ಶಿವಕುಮಾರ್‌ಗೆ ಕೊಕ್ ನೀಡಲು ಸಿದ್ದರಾಮಯ್ಯ ಬಣದ ಆಪ್ತರು ತಯಾರಿ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಸಿದ್ದರಾಮಯ್ಯ ಮತ್ತು ಡಿಕೆಶಿ ಕುರ್ಚಿ ಕಾಳಗದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಎಂಬುದೇ ಜನತೆಗೆ ಮರೀಚಿಕೆಯಾಗಿದೆ ಎಂದು ಬಿಜೆಪಿ ಆತಂಕ ವ್ಯಕ್ತಪಡಿಸಿದೆ.

