ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದರು. ವೇದಿಕೆ ಮೇಲೆಯೇ ಧಾರವಾಡದ ಹೆಚ್ಚುವರಿ ಎಸ್‌ಪಿ ನಾರಾಯಣ ಭರಮನಿ ಅವರತ್ತ ಸಿಎಂ ಕೈ ಎತ್ತಿದ್ದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.
ಕಾಂಗ್ರೆಸ್ ಬೆಳಗಾವಿಯಲ್ಲಿ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನಾ ಸಭೆ ಆಯೋಜಿಸಿತ್ತು. ಸಿಎಂ ಮಾತನಾಡುವಾಗ ಬಿಜೆಪಿಯ ಮಹಿಳಾ ಕಾರ್ಯಕರ್ತೆಯರು ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದರು.
ಪಾಕ್ ಜೊತೆ ಯುದ್ಧ ಅನಿವಾರ್ಯವಲ್ಲ ಎಂಬ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶಿಸಿ ಮುಜುಗರ ಉಂಟು ಮಾಡಿದ್ದಾರೆ.
ಈ ವೇಳೆ ತಾಳ್ಮೆ ಕಳೆದುಕೊಂಡ ಸಿದ್ದರಾಮಯ್ಯ ಹೆಚ್ಚುವರಿ ಎಸ್‌ಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಏನ್ರೀ ಇದು, ಏನು ಮಾಡ್ತಾ ಇದ್ದೀರಿ ಎಂದು ಪ್ರಶ್ನಿಸಿ ಕೈ ಎತ್ತಿ ಸಿಟ್ಟು ಹೊರಹಾಕಿದ ಪ್ರಸಂಗದ ವಿಡಿಯೋ ವೈರಲ್ ಆಗಿದೆ.