ವಿವಿಧ ಇಲಾಖೆಗಳ ಆರ್ಥಿಕ ಪ್ರಗತಿ ಪರಿಶೀಲನೆ ನಡೆಸಿದ ಸಿದ್ದರಾಮಯ್ಯ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2026-27ನೇ ಸಾಲಿನ‌ ಆಯವ್ಯಯದ ಪೂರ್ವಭಾವಿಯಾಗಿ ಮುಖ್ಯಮಂತ್ರಿ‌ ಸಿದ್ದರಾಮಯ್ಯ
ಅವರು ತೋಟಗಾರಿಕೆ ಮತ್ತು ಗಣಿ, ಭೂ ವಿಜ್ಞಾನ ಇಲಾಖೆಯ ಸಚಿವರು, ಕಾರ್ಮಿಕ ಹಾಗೂ ಒಳಾಡಳಿತ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿ, ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ, ಅನುದಾನ ಹಾಗೂ ಕಾರ್ಯಕ್ರಮಗಳ ಬೇಡಿಕೆಯನ್ನು ಆಲಿಸಿದರು.

ಅಧಿಕಾರಿಗಳ ಜೊತೆ ಬಜೆಟ್‌ ಪೂರ್ವಭಾವಿ ಸಭೆ ನಡೆಸಿ, ಇಲಾಖೆಗಳ ಅನುದಾನದ ಬೇಡಿಕೆ ಮತ್ತು ಹಮ್ಮಿಕೊಳ್ಳಲಾಗುವ ಕಾರ್ಯಕ್ರಮಗಳ ಮಾಹಿತಿ ಪಡೆದರು.

- Advertisement - 

ತೋಟಗಾರಿಕೆ ಮತ್ತು ಗಣಿ, ಭೂ ವಿಜ್ಞಾನ ಇಲಾಖೆಯ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಗೃಹ ಸಚಿವರಾದ ಡಾ.ಜಿ ಪರಮೇಶ್ವರ್, ಕಾರ್ಮಿಕ ಸಚಿವ ಸಂತೋಷ್ ಲಾಡ್, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ, ಶಾಸಕ ಬಿ.ಆರ್.ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

 

- Advertisement - 

 

Share This Article
error: Content is protected !!
";