ರೇಷ್ಮೆ, ಮೀನುಗಾರಿಕೆ ಸೇರಿದಂತೆ ಇತರೆ ಇಲಾಖೆಗಳ ಪ್ರಗತಿ ಪರಿಶೀಲಿಸಿದ ಸಿದ್ದರಾಮಯ್ಯ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2026-27ನೇ ಸಾಲಿನ ಬಜೆಟ್‌ಗೆ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ರೇಷ್ಮೆ, ಪಶು ಸಂಗೋಪನೆ ಇಲಾಖೆ ಹಾಗೂ ಮೀನುಗಾರಿಕೆ, ಬಂದರು & ಒಳನಾಡು ಜಲಸಾರಿಗೆ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳ ಜೊತೆ ಸಭೆ ನಡೆಸಿ, ಇಲಾಖೆಯ ಅನುದಾನದ ಬೇಡಿಕೆ, ಮುಂದಿನ ಆರ್ಥಿಕ ವರ್ಷದಲ್ಲಿ ಇಲಾಖಾ ವತಿಯಿಂದ ಜಾರಿಗೊಳಿಸಲು ಉದ್ದೇಶಿಸಿರುವ ನೂತನ ಕಾರ್ಯಕ್ರಮದ ಮಾಹಿತಿ ಪಡೆದರು.

ಸಭೆಯಲ್ಲಿ ರೇಷ್ಮೆ ಮತ್ತು ಪಶು ಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್, ಮೀನುಗಾರಿಕೆ, ಬಂದರು & ಒಳನಾಡು ಜಲಸಾರಿಗೆ ಇಲಾಖೆ ಸಚಿವರಾದ ಮಂಕಾಳ ಎಸ್. ವೈದ್ಯ, ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು, ಶಾಸಕ ಬಿ.ಆರ್.ಪಾಟೀಲ್,

- Advertisement - 

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಸೇರಿದಂತೆ ಆರ್ಥಿಕ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement - 
Share This Article
error: Content is protected !!
";