ಪದತ್ಯಾಗದ ದಿನಗಳನ್ನು ಎಣಿಸುತ್ತಾ ಕುಳಿತ ಸಿದ್ದರಾಮಯ್ಯ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ತಮ್ಮ ಪದತ್ಯಾಗದ ದಿನಗಳನ್ನು ಎಣಿಸುತ್ತಾ ಕುಳಿತಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್ ಜೊತೆ ಒಪ್ಪಂದ ಮಾಡಿಕೊಂಡಿರುವ ಸಿದ್ದರಾಮಯ್ಯ ಅವರು ಈಗ ತಮ್ಮ ಅಗ್ರಿಮೆಂಟ್‌ಅವಧಿಯು ಮುಕ್ತಾಯಗೊಳ್ಳುತ್ತಿರುವ ಹಂತದಲ್ಲಿ ಚಿಂತಾಕ್ರಾಂತರಾಗಿದ್ದಾರೆ ಬಿಜೆಪಿ ಟೀಕಿಸಿದೆ.

ಈಗ ತಮ್ಮ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರ ಕೈಕಾಲು ಹಿಡಿಯುತ್ತಿದ್ದಾರೆ. ಸಿಎಂ ಆಗಿರುವಾಗಲೇ ನಾನೇ ಸಿಎಂ ಎಂದು ಹೇಳಿಕೊಳ್ಳುವ ಪರಿಸ್ಥಿತಿ ಬಂದಿರುವುದು ದುರ್ದೈವದ ಸಂಗತಿ.

- Advertisement - 

ಸಿಎಂ ಕುರ್ಚಿಯಿಂದ ಕೆಳಗಿಳಿಯುವ ಅಸಂವಿಧಾನಿಕ ಗಡುವು ನಿರ್ಮಿಸಿಕೊಂಡು ರಾಜ್ಯವನ್ನು ಉದ್ಧಾರ ಮಾಡಲು ಸಾಧ್ಯವೇ? ಎಂದು ಬಿಜೆಪಿ ಪ್ರಶ್ನಿಸಿದೆ.

- Advertisement - 
Share This Article
error: Content is protected !!
";