ರೈಲ್ವೆ ಟಿಕೆಟ್ ದರ ಹೆಚ್ಚಳಕ್ಕೆ ಸಿದ್ದರಾಮಯ್ಯ ಕಿಡಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ರೈಲ್ವೆ ಟಿಕೆಟ್ ದರ ಹೆಚ್ಚಳ ಮಾಡಿರುವುದು ಈಗಾಗಲೇ ಪೆಟ್ರೋಲ್, ಡೀಸೆಲ್‌, ಗ್ಯಾಸ್ ಬೆಲೆಗಳ ಏರಿಕೆಯಿಂದ ಕಂಗಾಲಾಗಿರುವ ಜನಸಾಮಾನ್ಯರ ಮೇಲೆ ಮತ್ತೆ ಗದಾಪ್ರಹಾರ ಮಾಡಿದಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

- Advertisement - 

ನಾವು ರೈತರಿಗೆ ನೆರವಾಗುವ ದೃಷ್ಟಿಯಿಂದ ಹಾಲಿನ ಬೆಲೆಯೇರಿಕೆ ಮಾಡಿದಾಗ ನಮ್ಮ ವಿರುದ್ಧ ಬೀದಿಗಿಳಿದ ರಾಜ್ಯದ ಕರ್ನಾಟಕದ ಬಿಜೆಪಿ ನಾಯಕರು

- Advertisement - 

ಈಗ ಕೇಂದ್ರ ತನ್ನ ಖಜಾನೆ ಭರ್ತಿಗೆ ರೈಲ್ವೆ ಟಿಕೆಟ್ ದರ ಹೆಚ್ಚಳ ಮಾಡಿದರೂ ಬಾಯಿಮುಚ್ಚಿ ಕೂತಿರುವುದು ಖಂಡನೀಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

 

- Advertisement - 

Share This Article
error: Content is protected !!
";