ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಲವು ನಿಗಮಗಳಿಗೆ ಬಿಡಿಗಾಸೂ ಇಲ್ಲ ಕೆಲವು ನಿಗಮಗಳಿಗೆ ಬರೀ ಪುಡಿಗಾಸು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಅಹಿಂದ ಜಪ ಮಾಡುವ ಸಿಎಂ ಸಿದ್ದರಾಮಯ್ಯ ಅವರು ಕಳೆದ ಮೂರು ವರ್ಷಗಳಿಂದ ಪರಿಶಿಷ್ಟರು, ಹಿಂದುಳಿದ ಸಮುದಾಯಗಳ ಅಭಿವೃದ್ಧಿ ನಿಗಮಗಳನ್ನು ಅನುದಾನವಿಲ್ಲದೆ ಸೊರಗಿಸಿದ್ದೇ ದೊಡ್ಡ ಸಾಧನೆ ಎಂದು ಅಶೋಕ್ ದೂರಿದ್ದಾರೆ.
ಸಿಎಂ ಸಿದ್ದರಾಮಯ್ಯ ನವರೇ, ಇದೇನಾ ನಿಮ್ಮ ಸಾಮಾಜಿಕ ನ್ಯಾಯ? ಇದೇನಾ ಬಡವರು, ಪರಿಶಿಷ್ಟರು, ಹಿಂದುಳಿದವರ ಬಗ್ಗೆ ತಮಗಿರುವ ಕಾಳಜಿ?
ಅಹಿಂದ ಹೆಸರಿನಲ್ಲಿ ಜನರಿಗೆ ವಿಶ್ವಾಸದ್ರೋಹ ಮಾಡಿ ಅಧಿಕಾರಕ್ಕೆ ಬಂದಿರುವ ಕರ್ನಾಟಕ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅಶೋಕ್ ಎಚ್ಚರಿಸಿದ್ದಾರೆ.

