ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಜೆಟ್‌ನಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರಿಗೆ ನೀಡಿದ್ದು ಬಂಪರ್! ಎಂದು ಜೆಡಿಎಸ್ ಟೀಕಿಸಿದೆ.
ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ, ಮುಸ್ಲಿಮರು ಅತಿಹೆಚ್ಚು ವಾಸವಿರುವ ಪ್ರದೇಶದಲ್ಲಿ ಐಟಿಐ(ITI) ಸ್ಥಾಪನೆ, ಬೆಂಗಳೂರಿನ ಹಜ್‌ಭವನದಲ್ಲಿ ಹೆಚ್ಚುವರಿ ಕಟ್ಟಡ ನಿರ್ಮಾಣ,
ವಕ್ಫ್, ಖಬರಸ್ಥಾನಗಳ ಮೂಲಸೌಕರ್ಯಕ್ಕೆ ₹150 ಕೋಟಿ. ಮುಸ್ಲಿಮರ ಸರಳ ಮದುವೆಗೆ ₹50 ಸಾವಿರ ಸೇರಿದಂತೆ ಇನ್ನು ಹಲವಾರು ಯೋಜನೆಗಳನ್ನು ಸಿದ್ದರಾಮಯ್ಯ ನೀಡಿದ್ದಾರೆ ಎಂದು ಜೆಡಿಎಸ್ ಕಿಡಿಕಾರಿದೆ. ಆದರೆ, ಎಸ್ಸಿ, ಎಸ್ಟಿ, ಒಬಿಸಿ ಸಮುದಾಯಗಳಿಗೆ ಬಜೆಟ್‌ನಲ್ಲಿ ಸಿದ್ದರಾಮಯ್ಯ ಕೊಟ್ಟಿರುವುದು ಕೇವಲ ಚಿಪ್ಪು ಅಷ್ಟೇ ! ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.