ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವನದ ಕೊನೆಯ ಬಜೆಟ್‌ನಲ್ಲಿ ಹಿಂದುಳಿದ ವರ್ಗದವರಿಗೆ, ದಲಿತರಿಗೆ ಚಿಪ್ಪು ನೀಡಿದ್ದಾರೆ, ಅಲ್ಪಸಂಖ್ಯಾತರಿಗೆ ಮಾತ್ರ ಬಿರಿಯಾನಿ ತಿನ್ನಿಸಿದ್ದಾರೆ ಎಂದು ಬಿಜೆಪಿ ದೂರಿದರು.
ಬಾಬಾ ಸಾಹೇಬ್‌ಅಂಬೇಡ್ಕರ್‌ಅವರ ಆಶಯಗಳಿಗೆ ವಿರುದ್ಧವಾಗಿ ಮುಸ್ಲಿಮರಿಗೆ ಧರ್ಮಾಧಾರಿತ ಮೀಸಲಾತಿಯನ್ನು ನೀಡಿರುವುದು ಖಂಡನೀಯ. ಇದು ಸಂವಿಧಾನ ವಿರೋಧಿ ಬಜೆಟ್‌ಯಾಗಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ಬಜೆಟ್ ಮುಸ್ಲಿಂ ಲೀಗ್‌ಅಜೆಂಡಾವನ್ನು ಉತ್ತೇಜಿಸುತ್ತಿದೆ.
ತುಷ್ಟೀಕರಣದ ರಾಜಕೀಯಕ್ಕಾಗಿ ಹಾಗೂ ಅಲ್ಪಸಂಖ್ಯಾತರ ಮತಕ್ಕಾಗಿ ಕಾಂಗ್ರೆಸ್‌ಯಾವ ಹಂತಕ್ಕೆ ಬೇಕಾದರೂ ಇಳಿಯಲು ತಯಾರಿದೆ ಎಂಬುದು ಇದರಿಂದ ಸಾಬೀತಾಗಿದೆ ಎಂದು ಬಿಜೆಪಿ ಆರೋಪಿಸಿದರು.

